ಮುಂಬಯಿ: ಅಮೆರಿಕ ಫೆಡರಲ್ಸ್ ನೀತಿ ನಿರ್ಧಾರದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಬಾಂಬೆ ಷೇರುಪೇಟೆ ವಹಿವಾಟು ಭಾರೀ ಏರಿಳಿಕೆ ಕಂಡಿದ್ದು, ಬುಧವಾರ ಸಂವೇದಿ ಸೂಚ್ಯಂಕ 78ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.
ಇದನ್ನೂ ಓದಿ:ಕೃಷಿ ಬದುಕಿಗೆ ಆಶಾಕಿರಣವಾದ ವೆನಿಲ್ಲಾ ಬೆಳೆ, ಏನಿದರ ಇತಿಹಾಸ…
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 77.94 ಅಂಕ ಇಳಿಕೆಯಾಗಿದ್ದು, 58,927.33 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ 15.35 ಅಂಕಗಳಷ್ಟು ಕುಸಿತ ಕಂಡಿದ್ದು, 17,546.65ರ ಮಟ್ಟ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಕುಸಿತದ ಪರಿಣಾಮ ಎಚ್ ಡಿಎಫ್ ಸಿ, ನೆಸ್ಲೆ ಇಂಡಿಯಾ, ಐಸಿಐಸಿಐ ಬ್ಯಾಂಕ್, ಕೋಟಕ್ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಟೆಕ್ ಮಹೀಂದ್ರ, ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್ ಸಿಎಲ್ ಟೆಕ್ ಮತ್ತು ಬಜಾಜ್ ಆಟೋ ಷೇರುಗಳು ಲಾಭ ಗಳಿಸಿದೆ.
ಯುರೋಪಿಯನ್ ಸೇರಿದಂತೆ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟಿಗೆ ಸಾಕ್ಷಿಯಾಗಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಮುಖ್ಯಸ್ಥ ಬಿನೋದ್ ಮೋದಿ ವಿಶ್ಲೇಷಿಸಿದ್ದಾರೆ.