ಮುಂಬಯಿ: ಹಣದುಬ್ಬರದ ನಿಯಂತ್ರಣಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ (ಮೇ 04) 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ರೆಪೋ ದರ ಹೆಚ್ಚಳ ಮಾಡಿದ ಪರಿಣಾಮ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,307 ಅಂಕಗಳಷ್ಟು ಭರ್ಜರಿ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ರಸ್ತೆ ಅಪಘಾತ ; ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 1,307 ಅಂಕಗಳಷ್ಟು ಇಳಿಕೆಯೊಂದಿಗೆ 55,669 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 392 ಅಂಕ ಕುಸಿತದೊಂದಿಗೆ 16,678 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಕುಸಿತದ ಪರಿಣಾಮ ಅಪೋಲೊ ಆಸ್ಪತ್ರೆ, ಅದಾನಿ ಪೋರ್ಟ್ಸ್, ಟೈಟಾನ್, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಬಜಾಜ್ ಫೈನಾನ್ಸ್, ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಏಷಿಯನ್ ಪೇಂಟ್ಸ್, ಮಾರುತಿ, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳ ಮೌಲ್ಯ ಭಾರೀ ಕುಸಿತ ಕಂಡಿದೆ.
ಮತ್ತೊಂದೆಡೆ ಪವರ್ ಗ್ರಿಡ್, ಎನ್ ಟಿಪಿಸಿ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಅಮೆರಿಕದ ಫೆಡರಲ್ ರಿಸರ್ವ್ ಕೂಡಾ ಇಂದು 50 ಬೇಸಿಕ್ ಪಾಯಿಂಟ್ಸ್ ಗಳಷ್ಟು ಬಡ್ಡಿ ದರ ಹೆಚ್ಚಳ ಮಾಡುವ ನಿರೀಕ್ಷೆ ಇದ್ದು, ಇದು ಕೂಡಾ ಷೇರುಪೇಟೆ ಹೂಡಿಕೆದಾರರ ಮೇಲೆ ಪರಿಣಾಮ ಬೀರಿರುವುದಾಗಿ ವರದಿ ತಿಳಿಸಿದೆ.