ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ದುರ್ಬಲ ವಹಿವಾಟು ಮತ್ತು ವಿದೇಶಿ ಬಂಡವಾಳದ ಹೊರಹರಿವು ಮುಂದುವರಿದ ಪರಿಣಾಮ ಗುರುವಾರ (ನವೆಂಬರ್ 18) ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ.
ಇದನ್ನೂ ಓದಿ:ಟಿ20 ಪಂದ್ಯದ ವೇಳೆ ಸಿರಾಜ್ ತಲೆಗೆ ಹೊಡೆದ ನಾಯಕ ರೋಹಿತ್: ವಿಡಿಯೋ ವೈರಲ್
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 112.13 ಅಂಕಗಳಷ್ಟು ಇಳಿಕೆಯಾಗಿದ್ದು, 59,896.20 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 35.95 ಅಂಕ ಕುಸಿದಿದ್ದು, 17,862.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಸೆನ್ಸೆಕ್ಸ್, ನಿಫ್ಟಿ ಕುಸಿತದಿಂದಾಗಿ ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್ ಸಿಎಲ್ ಟೆಕ್, ಟೆಕ್ ಮಹೀಂದ್ರ, ಡಾ.ರೆಡ್ಡೀಸ್, ಮಾರುತಿ, ಬಜಾಜ್ ಆಟೋ ಮತ್ತು ಟಿಸಿಎಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಎಸ್ ಬಿಐ, ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಫಿನ್ ಸರ್ವ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಲಾಭಗಳಿಸಿದೆ.
ಬಾಂಬೆ ಷೇರುಪೇಟೆ ಬುಧವಾರ 314.04 ಅಂಕಗಳಷ್ಟು ಕುಸಿತ ಕಂಡಿದ್ದು, 60,008.33 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 100.55 ಅಂಕ ಇಳಿಕೆಯಾಗಿದ್ದು, 17,898.65 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.