ಮುಂಬಯಿ:ಕೋವಿಡ್ ನ ನೂತನ ರೂಪಾಂತರಿ ತಳಿ ಒಮಿಕ್ರಾನ್ ಸೋಂಕು ಹರಡುತ್ತಿರುವ ಕಳವಳ ಹಾಗೂ ಜಾಗತಿಕ ಷೇರುಮಾರುಕಟ್ಟೆಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಸೋಮವಾರ (ಡಿಸೆಂಬರ್ 06) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ.
ಇದನ್ನೂ ಓದಿ:ಯುವ ಆಟಗಾರರು ನೀಡುವ ತಲೆಬಿಸಿ ಬಗ್ಗೆ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 311.11 ಅಂಕ ಇಳಿಕೆಯಾಗಿದ್ದು, 57,385.35 ಅಂಕದೊಂದಿಗೆ ಆರಂಭಿಕ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 81.70 ಅಂಕ ಕುಸಿತವಾಗಿದ್ದು, 17,115 ಅಂಕಗಳ ಗಡಿ ತಲುಪಿದೆ.
ಇಂಡಸ್ ಇಂಡ್ ಬ್ಯಾಂಕ್, ಮಾರುತಿ, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಇನ್ಫೋಸಿಸ್ ಮತ್ತು ಎನ್ ಟಿಪಿಸಿ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಟಾಟಾ ಸ್ಟೀಲ್, ಎಲ್ ಆ್ಯಂಡ್ ಟಿ, ಎಚ್ ಯುಎಲ್, ಎಚ್ ಡಿಎಫ್ ಸಿ ಹಾಗೂ ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿದೆ.
ಶುಕ್ರವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 764 ಅಂಕಗಳಷ್ಟು ಕುಸಿತದೊಂದಿಗೆ 57,696.46 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 204.95 ಅಂಕ ಕುಸಿತದೊಂದಿಗೆ 17,196.70 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.