Advertisement

ಹೂಡಿಕೆದಾರರಿಗೆ ಲಾಭ;ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 60,000 ಮಟ್ಟಕ್ಕೆ ಏರಿಕೆ, ನಿಫ್ಟಿ ಜಿಗಿತ

05:00 PM Sep 27, 2021 | Team Udayavani |

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಸೋಮವಾರ (ಸೆಪ್ಟೆಂಬರ್) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.

Advertisement

ಇದನ್ನೂ ಓದಿ:ಐಪಿಎಲ್ ನಡುವೆಯೇ ಕೆಕೆಆರ್ ತೊರೆದು ಭಾರತಕ್ಕೆ ಆಗಮಿಸಿದ ಕುಲದೀಪ್ ಯಾದವ್

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 29.41 ಅಂಕಗಳ ಅಲ್ಪಪ್ರಮಾಣದ ಏರಿಕೆಯೊಂದಿಗೆ 60,077.88 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 1.90 ಅಂಕಗಳ ಏರಿಕೆಯೊಂದಿಗೆ 17,855.10 ಅಂಕಗಳ ಮಟ್ಟ ತಲುಪಿದೆ.

ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆಯಿಂದ ಮಾರುತಿ ಸುಜುಕಿ, ಟಾಟಾ ಮೋಟಾರ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರಾ, ಒಎನ್ ಜಿಸಿ, ಹೀರೋ ಮೋಟಾರ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಎಚ್ ಸಿಎಲ್ ಟೆಕ್, ಡಿವಿಸ್ ಲ್ಯಾಬ್ಸ್, ವಿಪ್ರೊ, ಟೆಕ್ ಮಹೀಂದ್ರ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ನಷ್ಟ ಕಂಡಿದೆ.

ಸೋಮವಾರ ಬೆಳಗ್ಗೆ ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 245.62 ಅಂಕಗಳ ಏರಿಕೆಯೊಂದಿಗೆ 60,339.28 ಅಂಕಗಳ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಬಳಿಕ ಸ್ವಲ್ಪ ಕುಸಿತ ಕಂಡ ಸೆನ್ಸೆಕ್ಸ್ 245.62 ಅಂಕಗಳೊಂದಿಗೆ 60,294.09 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಎನ್ ಎಸ್ ಇ ನಿಫ್ಟಿ ಕೂಡಾ 69.90 ಅಂಕಗಳ ಏರಿಕೆಯೊಂದಿಗೆ ದಾಖಲೆಯ 17,923.10 ಅಂಕಗಳ ಮಟ್ಟ ತಲುಪಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next