ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ಹಣಕಾಸು ನೀತಿ ಸಮಿತಿಯ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಲಾಭಾಂಶ ಕಾಯ್ದಿರಿಸಿದ ಪರಿಣಾಮ ಮಂಗಳವಾರ (ಜೂನ್ 07) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 593 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ಪಣಜಿ : ಸ್ನೇಹಿತನನ್ನೇ ಅಪಹರಿಸಿ 70 ಲಕ್ಷಕ್ಕೆ ಬೇಡಿಕೆ ಇಟ್ಟವರು ಕಡೆಗೂ ಪೊಲೀಸರ ಬಲೆಗೆ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 593 ಅಂಕ ಕುಸಿತವಾಗಿದ್ದು, 55,107 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 153 ಅಂಕಗಳಷ್ಟು ಇಳಿಕೆಯೊಂದಿಗೆ 16,416 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದಾಗಿ ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್, ಟಿಸಿಎಸ್, ಎಚ್ ಡಿಎಫ್ ಸಿ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ವಿಪ್ರೋ, ಟಾಟಾ ಸ್ಟೀಲ್, ಆ್ಯಕ್ಸಿಸ್ ಬ್ಯಾಂಕ್, ಸಿಪ್ಲಾ ಲಿಮಿಟೆಡ್, ಐಟಿಸಿ ಲಿಮಿಟೆಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪವರ್ ಗ್ರಿಡ್ ಕಾರ್ಪೋರೇಶನ್ ಮತ್ತು ಟೈಟಾನ್ ಕಂಪನಿ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಒಎನ್ ಜಿಸಿ, ಕೋಲ್ ಇಂಡಿಯಾ ಲಿಮಿಟೆಡ್, ಎನ್ ಟಿಪಿಸಿ ಲಿಮಿಟೆಡ್, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್, ಲುಪಿನ್ ಲಿಮಿಟೆಡ್, ಟಾಟಾ ಮೋಟಾರ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ ಲಿಮಿಟೆಡ್, ಬಜಾಜ್ ಆಟೋ, ಭಾರ್ತಿ ಏರ್ ಟೆಲ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ.