ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಮಿಶ್ರ ವಹಿವಾಟಿನ ಪರಿಣಾಮ ಶುಕ್ರವಾರ (ಫೆ.04) ಮುಂಬಯಿ ಷೇರುಪೇಟೆಯ 140ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಉತ್ತರಪ್ರದೇಶಕ್ಕೆ ಯೋಗಿಯಂತಹ ನಾಯಕ ಬೇಕು, ನಕಲಿ ಸಮಾಜವಾದಿಗಳಲ್ಲ: ಪ್ರಧಾನಿ ಮೋದಿ
ವಿದೇಶಿ ಬಂಡವಾಳದ ಹೊರಹರಿವು ನಿರಂತರವಾಗಿರುವುದು ಷೇರುಪೇಟೆ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದು, ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 143.20 ಅಂಕಗಳಷ್ಟು ಇಳಿಕೆಯಾಗಿದ್ದು, 58,644.82 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 43.90 ಅಂಕ ಕುಸಿತವಾಗಿದ್ದು, 17,516.30 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಎಸ್ ಬಿಐ, ಮಹೀಂದ್ರ ಆ್ಯಂಡ್ ಮಹೀಂದ್ರ, ಎನ್ ಟಿಪಿಸಿ, ಕೋಟಕ್ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಎಚ್ ಡಿಎಫ್ ಸಿ ಮತ್ತು ಪವರ್ ಗ್ರಿಡ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಸನ್ ಫಾರ್ಮಾ, ಏಷ್ಯನ್ ಪೇಂಟ್ಸ್, ಟಾಟಾ ಸ್ಟೀಲ್, ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 220.21 ಅಂಕಗಳಷ್ಟು ಇಳಿಕೆಯಾಗಿದ್ದು, 58,567.81 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 72.85 ಅಂಕ ಇಳಿಕೆಯಾಗಿದ್ದು, 17,487.35 ಅಂಕಗಳ ಮಟ್ಟ ತಲುಪಿತ್ತು.