ನವದೆಹಲಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟಿನ ಪರಿಣಾಮ ಗುರುವಾರ (ಜುಲೈ15) ಮುಂಬಯಿ ಷೇರುಮಾರುಕಟ್ಟೆಯ ಸಂವೇದಿ ಸೂಚ್ಯಂಕ 100ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ನಡೆಸಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಮಂಡ್ಯ ಉಪ ಅರಣ್ಯಾಧಿಕಾರಿ ವೆಂಕಟೇಶ್ ಮನೆ ಮೇಲೆ ಎಸಿಬಿ ದಾಳಿ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 111.50 ಅಂಕಗಳ ಏರಿಕೆಯೊಂದಿಗೆ 53,015.55 ಅಂಕಗಳ ವಹಿವಾಟು ನಡೆಸಿದೆ. ಅಲ್ಲದೇ ಎನ್ ಎಸ್ ಇ ನಿಫ್ಟಿ 31.30 ಅಂಕ ಏರಿಕೆಯೊಂದಿಗೆ 15,885.25ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಎಲ್ ಆ್ಯಂಡ್ ಟಿ, ಎಚ್ ಸಿಎಲ್ ಟೆಕ್, ಟೆಕ್ ಮಹೀಂದ್ರ, ಎಚ್ ಡಿಎಫ್ ಸಿ ಬ್ಯಾಂಕ್, ಡಾ,ರೆಡ್ಡೀಸ್ ಮತ್ತು ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಮಹೀಂದ್ರಾ ಆ್ಯಂಡ್ ಮಹೀಂದ್ರ, ಏಷ್ಯನ್ ಪೇಂಟ್ಸ್, ಮಾರುತಿ, ಐಟಿಸಿ, ಟೈಟಾನ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಅನುಭವಿಸಿದೆ.
ಮುಂಬಯಿ ಷೇರುಪೇಟೆಯ ಬುಧವಾರದ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 134,32 ಅಂಕ ಏರಿಕೆಯಾಗಿದ್ದು, 52,904.05
ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ಎನ್ ಎಸ್ ಇ ನಿಫ್ಟಿ ಕೂಡಾ 41,60 ಅಂಕ ಏರಿಕೆಯೊಂದಿಗೆ 15,853.95ರ ಗಡಿ ದಾಟಿತ್ತು.