ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಧನಾತ್ಮಕ ವಹಿವಾಟಿನ ಪರಿಣಾಮ ಸೋಮವಾರ (ಸೆಪ್ಟೆಂಬರ್ 27) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ಸಾರ್ವಕಾಲಿಕ ಗರಿಷ್ಠ ದಾಖಲೆ ಬರೆದಿದೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,041 ಕೋವಿಡ್ ಪ್ರಕರಣ ಪತ್ತೆ, 29,621 ಮಂದಿ ಗುಣಮುಖ
ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 245.62 ಅಂಕಗಳ ಏರಿಕೆಯೊಂದಿಗೆ 60,339.28 ಅಂಕಗಳ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಬಳಿಕ ಸ್ವಲ್ಪ ಕುಸಿತ ಕಂಡ ಸೆನ್ಸೆಕ್ಸ್ 245.62 ಅಂಕಗಳೊಂದಿಗೆ 60,294.09 ಅಂಕಗಳಲ್ಲಿ ವಹಿವಾಟು ನಡೆಸಿದೆ.
ಎನ್ ಎಸ್ ಇ ನಿಫ್ಟಿ ಕೂಡಾ 69.90 ಅಂಕಗಳ ಏರಿಕೆಯೊಂದಿಗೆ ದಾಖಲೆಯ 17,923.10 ಅಂಕಗಳ ಮಟ್ಟ ತಲುಪಿದೆ. ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಮಾರುತಿ, ಎಚ್ ಡಿಎಫ್ ಸಿ ಬ್ಯಾಂಕ್, ಎಸ್ ಬಿಐ, ಬಜಾಜ್ ಆಟೋ, ಮಹೀಂದ್ರ ಆ್ಯಂಡ್ ಮಹೀಂದ್ರ, ಆ್ಯಕ್ಸಿಸ್ ಬ್ಯಾಂಕ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭ ಗಳಿಸಿದೆ.
ನೆಸ್ಲೆ ಇಂಡಿಯಾ, ಟೆಕ್ ಮಹೀಂದ್ರಾ, ಡಾ.ರೆಡ್ಡೀಸ್ ಮತ್ತು ಐಟಿಸಿ ಷೇರುಗಳು ನಷ್ಟ ಕಂಡಿದೆ. ಶುಕ್ರವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 163.11 ಅಂಕಗಳ ಏರಿಕೆಯೊಂದಿಗೆ ದಾಖಲೆಯ 60,048 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಳಿಸಿತ್ತು.