ಮುಂಬಯಿ:ಅಂತಾರಾಷ್ಟ್ರೀಯ ಷೇರುಮಾರುಕಟ್ಟೆಯಲ್ಲಿನ ಧನಾತ್ಮಕ ವಹಿವಾಟಿನ ಪರಿಣಾಮ ಗುರುವಾರ (ಡಿಸೆಂಬರ್ 02) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 214 ಅಂಕಗಳಷ್ಟು ಏರಿಕೆಯಾಗಿದೆ.
ಇದನ್ನೂ ಓದಿ:2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 214.43 ಅಂಕಗಳು ಏರಿಕೆಯಾಗಿದ್ದು, 57,899.22 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 53.95 ಅಂಕ ಏರಿಕೆ ಕಂಡಿದ್ದು, 17,220.85 ಅಂಕಗಳ ಮಟ್ಟ ತಲುಪಿದೆ.
ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್ ಡಿಎಫ್ ಸಿ, ಪವರ್ ಗ್ರಿಡ್, ಟೈಟಾನ್, ಸನ್ ಫಾರ್ಮಾ, ಮಾರುತಿ, ಎಚ್ ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಎಲ್ ಆ್ಯಂಡ್ ಟಿ, ಐಸಿಐಸಿಐ ಬ್ಯಾಂಕ್, ನೆಸ್ಲೆ ಇಂಡಿಯಾ, ಆ್ಯಕ್ಸಿಸ್ ಬ್ಯಾಂಕ್, ಟೆಕ್ ಮಹೀಂದ್ರ ಷೇರುಗಳು ನಷ್ಟ ಕಂಡಿದೆ.
ಬುಧವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 619.92 ಅಂಕ ಏರಿಕೆ ಕಂಡಿದ್ದು, 57,684.79 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 183.70 ಅಂಕಗಳಷ್ಟು ಏರಿಕೆಯಾಗಿದ್ದು, 17,166.90ರ ಗಡಿ ಮುಟ್ಟಿತ್ತು.