ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಪಾಸಿಟಿವ್ ಟ್ರೆಂಡ್ ಹಿನ್ನೆಲೆಯಲ್ಲಿ ಸೋಮವಾರ (ಮಾರ್ಚ್ 21) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 264 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ಅಡುಗೆ ಪಾತ್ರೆಗಳಲ್ಲಿ ಮಾದಕ ವಸ್ತು ಸಾಗಾಟ : ಅಧಿಕಾರಿಗಳಿಂದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 264.02 ಅಂಕಗಳಷ್ಟು ಏರಿಕೆಯಾಗಿದ್ದು, 58,127.95 ಅಂಕಗಳಲ್ಲಿ ವಹಿವಾಟು ನಡೆದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 66.3 ಅಂಕಗಳಷ್ಟು ಏರಿಕೆಯೊಂದಿಗೆ 17,353.35 ಅಂಕಗಳ ಮಟ್ಟ ತಲುಪಿದೆ.
ಮಾರುತಿ ಸುಜುಕಿ ಇಂಡಿಯಾ, ವಿಪ್ರೋ, ಟೆಕ್ ಮಹೀಂದ್ರ, ಟಾಟಾ ಸ್ಟೀಲ್, ಇನ್ಫೋಸಿಸ್, ಟೈಟಾನ್, ಟಾಟಾ ಕನ್ ಸಲ್ಟೆನ್ಸಿ ಸರ್ವೀಸ್ ಮತ್ತು ಎಚ್ ಸಿಎಲ್ ಟೆಕ್ನಾಲಜೀಸ್ ಲಿಮಿಟೆಡ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಏಷಿಯನ್ ಪೇಂಟ್ಸ್, ಕೋಟಕ್ ಮಹೀಂದ್ರ ಬ್ಯಾಂಕ್, ಪವರ್ ಗ್ರಿಡ್ ಮತ್ತು ಹಿಂದೂಸ್ತಾನ್ ಯುನಿಲಿವರ್ ಲಿಮಿಟೆಡ್ ಷೇರುಗಳು ನಷ್ಟ ಕಂಡಿದೆ. ಗುರುವಾರ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 1,047 ಅಂಕ ಏರಿಕೆಯಾಗಿದ್ದು, 57,863.93 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು. ಎನ್ ಎಸ್ ಇ ನಿಫ್ಟಿ 311 ಅಂಕ ಏರಿಕೆಯಾಗಿದ್ದು, 17,287.05 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು. ಶುಕ್ರವಾರ ಹೋಳಿ ಹಬ್ಬದ ಪ್ರಯುಕ್ತ ಷೇರುಮಾರುಕಟ್ಟೆಗೆ ವಹಿವಾಟು ಬಂದ್ ಆಗಿತ್ತು.