ಮುಂಬಯಿ: ಜಾಗತಿಕ ಹಾಗೂ ಏಷಿಯನ್ ಷೇರು ಮಾರುಕಟ್ಟೆಯಲ್ಲಿನ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ (ಮೇ 23) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ಶಶಿಕುಮಾರ್ ಪುತ್ರ ಅಕ್ಷಿತ್ ಚೊಚ್ಚಲ ಚಿತ್ರ ‘ಸೀತಾಯಣ’ ಮೇ 27ಕ್ಕೆ ರಿಲೀಸ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 458.91 ಅಂಕಗಳಷ್ಟು ಏರಿಕೆಯೊಂದಿಗೆ 54,786.93 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 83.35 ಅಂಕ ಏರಿಕೆಯಾಗಿದ್ದು, 16,349.50 ಅಂಕಗಳಲ್ಲಿ ವಹಿವಾಟು ನಡೆದಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಮಾರುತಿ, ಮಹೀಂದ್ರ ಆ್ಯಂಡ್ ಮಹೀಂದ್ರ, ಏಷಿಯನ್ ಪೇಂಟ್ಸ್ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟಾಟಾ ಸ್ಟೀಲ್, ಐಟಿಸಿ, ಪವರ್ ಗ್ರಿಡ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಕಂಡಿದೆ.
ಹಾಂಗ್ ಕಾಂಗ್, ಶಾಂಘೈ ಮತ್ತು ಟೋಕಿಯೋ ಷೇರುಮಾರುಕಟ್ಟೆ ಮಿಶ್ರ ವಹಿವಾಟು ನಡೆದಿದ್ದು, ಶುಕ್ರವಾರ ಅಮೆರಿಕ ಷೇರುಪೇಟೆ ಮಿಶ್ರ ವಹಿವಾಟಿನೊಂದಿಗೆ ಕೊನೆಗೊಂಡಿತ್ತು.
ಶುಕ್ರವಾರ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 1,534.16 ಅಂಕಗಳಷ್ಟು ಭಾರೀ ಕುಸಿತದೊಂದಿಗೆ 54,326.39 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 456.75 ಅಂಕಗಳಷ್ಟು ಕುಸಿತದೊಂದಿಗೆ 16,266.15 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು.