ನವದೆಹಲಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ (ಜುಲೈ 13) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳಷ್ಟು ಏರಿಕೆ ಕಂಡಿದೆ. ಇದರಿಂದ ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭ ಗಳಿಸಿದೆ.
ಇದನ್ನೂ ಓದಿ:ತಮಿಳುನಾಡು ನಿರ್ಧಾರದ ಬಗ್ಗೆ ಮಾತನಾಡಲ್ಲ, ನಾವು ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ: ಸಿಎಂ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕವಾಗಿ 228 ಅಂಕಗಳಷ್ಟು ಏರಿಕೆ ಕಂಡಿದ್ದು, 52,600.69 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 69.50 ಅಂಕಗಳಷ್ಟು ಏರಿಕೆ ಕಂಡು 15,762.10ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ಎನ್ ಟಿಪಿಸಿ, ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್, ಪವರ್ ಗ್ರಿಡ್, ಮಹೀಂದ್ರ ಆ್ಯಂಡ್ ಮಹೀಂದ್ರ, ಆ್ಯಕ್ಸಿಸ್ ಬ್ಯಾಂಕ್, ಎಲ್ ಆ್ಯಂಡ್ ಟಿ ಮತ್ತು ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಇನ್ಫೋಸಿಸ್, ಟೆಕ್ ಮಹೀಂದ್ರ, ಎಚ್ ಸಿಎಲ್ ಟೆಕ್ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಅನುಭವಿಸಿದೆ.
ಮುಂಬಯಿ ಷೇರುಪೇಟೆಯ ಹಿಂದಿನ ದಿನದ ವಹಿವಾಟಿನಲ್ಲಿ 13,50 ಅಂಕಗಳಷ್ಟು ಇಳಿಕೆಯಾಗಿ 52,372.69 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ಎನ್ ಎಸ್ ಇ ನಿಫ್ಟಿ 2.80ರಷ್ಟು ಅಲ್ಪ ಏರಿಕೆಯೊಂದಿಗೆ 15,692.60ರ ಗಡಿ ತಲುಪಿತ್ತು.