ಮುಂಬೈ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಪಾಸಿಟಿವ್ ಟ್ರೆಂಡ್ ಪರಿಣಾಮ ಸೋಮವಾರ(ಆಗಸ್ಟ್ 09) ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 200 ಅಂಕಗಳಷ್ಟು ಏರಿಕೆ ಕಂಡಿದ್ದು, ಇನ್ಫೋಸಿಸ್, ಐಟಿಸಿ ಷೇರುಗಳು ಲಾಭಗಳಿಸುವಂತಾಗಿದೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,499 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಇಂದು 219.52 ಅಂಕಗಳಷ್ಟು ಏರಿಕೆಯೊಂದಿಗೆ 54,492.24 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 65.05 ಅಂಶ ಏರಿಕೆಯೊಂದಿಗೆ 16,303.25 ಅಂಕಗಳ ವಹಿವಾಟು ನಡೆಸಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಟೆಕ್ ಮಹೀಂದ್ರಾ, ಟೈಟಾನ್, ಬಜಾಜ್ ಫಿನ್ ಸರ್ವ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಲಾಭಗಳಿಸಿದೆ. ಏತನ್ಮಧ್ಯೆ ಕೋಟಕ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಡಾ.ರೆಡ್ಡೀಸ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.
ಶುಕ್ರವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 215.12 ಅಂಕ ಇಳಿಕೆಯೊಂದಿಗೆ 54,277.72 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೂಡಾ 56.40 ಅಂಕ ಇಳಿಕೆಯಾಗಿದ್ದು, 16,238.20 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿತ್ತು.