ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ(ಮೇ 25) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 260 ಅಂಕಗಳಷ್ಟು ಏರಿಕೆ ಕಂಡಿದ್ದು, ಇದರಿಂದ ಇನ್ಫೋಸಿಸ್, ಎಚ್ ಡಿಎಫ್ ಸಿ ಷೇರುಗಳು ಲಾಭಗಳಿಸುವಂತಾಗಿದೆ.
ಇದನ್ನೂ ಓದಿ:ಅನಾಥವಾಗಿ ಪತ್ತೆಯಾದ ನಾಗರಹಾವಿನ ಮೊಟ್ಟೆಗೆ ಕೃತಕ ಶಾಖ: ಹೊರಬಂದ ಮರಿಗಳು ಮತ್ತೆ ಕಾಡಿಗೆ
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 265.07 ಅಂಕ ಏರಿಕೆಯಾಗಿದ್ದು, 50,916.97 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 86 ಅಂಕ ಏರಿಕೆಯಾಗಿದ್ದು, 15,283.70ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಮಹೀಂದ್ರ ಆ್ಯಂಡ್ ಮಹೀಂದ್ರ, ಟೈಟಾನ್, ಬಜಾಜ್ ಫಿನ್ ಸರ್ವ್, ನೆಸ್ಲೆ ಇಂಡಿಯಾ, ಎನ್ ಟಿಪಿಸಿ, ಎಚ್ ಯುಎಲ್, ಒಎನ್ ಜಿಸಿ ಮತ್ತು ಇನ್ಫೋಸಿಸ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಎಚ್ ಡಿಎಫ್ ಸಿ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಎಸ್ ಬಿಐ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಅನುಭವಿಸಿದೆ.
ಸೋಮವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 111.42 ಅಂಕ ಏರಿಕೆಯಾಗಿದ್ದು, 50,651.90 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೂಡಾ 22.40 ಏರಿಕೆಯಾಗಿ 15,197.70ರ ಗಡಿ ದಾಟಿತ್ತು.