ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಪಾಸಿಟಿವ್ ವಹಿವಾಟಿನ ಪರಿಣಾಮ ಬುಧವಾರ (ಮಾರ್ಚ್ 23) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಏರಿಕೆ ಕಂಡಿದೆ.
ಇದನ್ನೂ ಓದಿ:ವಾಹನ ಸವಾರರಿಗೆ ಕಹಿ ಸುದ್ದಿ: ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427.26 ಅಂಕಗಳಷ್ಟು ಏರಿಕೆಯೊಂದಿಗೆ 58,416.56 ಅಂಕಗಳಲ್ಲಿ ವಹಿವಾಟು ಮುಂದುವರಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 126.9 ಅಂಕ ಏರಿಕೆಯಾಗಿದ್ದು, 17,442.40 ಅಂಕಗಳ ಮಟ್ಟ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಡಾ.ರೆಡ್ಡೀಸ್ ಲ್ಯಾಬೋರೇಟರಿ, ಸನ್ ಫಾರ್ಮಾ, ಬಜಾಜ್ ಫೈನಾನ್ಸ್, ಇಂಡಸ್ ಇಂಡ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಸ್ ಬಿಐ, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಭಾರ್ತಿ ಏರ್ ಟೆಲ್, ಏಷಿಯನ್ ಪೇಂಟ್ಸ್, ಮಾರುತಿ ಸುಜುಕಿ ಇಂಡಿಯಾ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ. ಮಂಗಳವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 698.81 ಅಂಕ ಏರಿಕೆಯಾಗಿದ್ದು, 57,989.30 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಅದೇ ರೀತಿ ನಿಫ್ಟಿ 197.90 ಅಂಕ ಏರಿಕೆಯೊಂದಿಗೆ 17,315.50 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.