ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಮಂಗಳವಾರ (ಡಿಸೆಂಬರ್ 07) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 400ಕ್ಕೂ ಅಧಿಕ ಅಂಕ ಏರಿಕೆ ಕಂಡಿದ್ದು, ಹೂಡಿಕೆದಾರರಲ್ಲಿ ಉತ್ಸಾಹ ಮೂಡಿಸಿದೆ.
ಇದನ್ನೂ ಓದಿ:ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 444.17 ಅಂಕಗಳಷ್ಟು ಏರಿಕೆ ಕಂಡಿದ್ದು, 57,191.31 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 131.60 ಅಂಕ ಏರಿಕೆಯೊಂದಿಗೆ 17,043.85 ಅಂಕಗಳ ಗಡಿ ತಲುಪಿದೆ.
ಟಾಟಾ ಸ್ಟೀಲ್, ಕೋಟಕ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಮಾರುತಿ, ಇಂಡಸ್ ಇಂಡ್ ಬ್ಯಾಂಕ್ ಮತ್ತು ಎಸ್ ಬಿಐ ಷೇರುಗಳು ಶೇ.2ರಷ್ಟು ಲಾಭಗಳಿಸಿದೆ. ಮತ್ತೊಂದೆಡೆ ಡಾ.ರೆಡ್ಡೀಸ್, ಟೆಕ್ ಮಹೀಂದ್ರ, ಎಲ್ ಆ್ಯಂಡ್ ಟಿ, ಭಾರ್ತಿ ಏರ್ ಟೆಲ್, ಎಚ್ ಸಿಎಲ್ ಟೆಕ್ ಷೇರುಗಳು ನಷ್ಟ ಕಂಡಿದೆ.
ಸೋಮವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 949.32 ಅಂಕಗಳಷ್ಟು ಕುಸಿತಗೊಂಡಿತ್ತು, 56,747.14 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 284.45 ಅಂಕ ಇಳಿಕೆಯೊಂದಿಗೆ 16,912.25 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದ್ದು, ಹೂಡಿಕೆದಾರರಿಗೆ 4 ಲಕ್ಷ ಕೋಟಿ ರೂಪಾಯಿಯಷ್ಟು ನಷ್ಟವಾಗಿತ್ತು.