ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಶುಕ್ರವಾರ (ನವೆಂಬರ್ 12) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 400 ಅಂಕಗಳಷ್ಟು ಏರಿಕೆಯಾಗಿದೆ. ಇದರಿಂದ ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ.
ಇದನ್ನೂ ಓದಿ:ಜಿನ್ನಾ ಮೊದಲ ಪ್ರಧಾನಿಯಾಗಬೇಕಿತ್ತು…ದೇಶ ಇಬ್ಭಾಗವಾಗಲು ಕಾಂಗ್ರೆಸ್ ಕಾರಣ: ಒವೈಸಿ
ಆರಂಭಿಕ ವಹಿವಾಟಿನಲ್ಲಿ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 400.87 ಅಂಕಗಳಷ್ಟು ಏರಿಕೆಯಾಗಿದ್ದು, 60,320.56 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 120.10 ಅಂಕಗಳಷ್ಟು ಏರಿಕೆಯೊಂದಿಗೆ 17,993.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟೆಕ್ ಮಹೀಂದ್ರ, ಇನ್ಫೋಸಿಸ್, ಟಾಟಾ ಸ್ಟೀಲ್, ಸನ್ ಫಾರ್ಮಾ ಮತ್ತು ನೆಸ್ಲೆ ಇಂಡಿಯಾ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಬಜಾಜ್ ಆಟೋ ಮತ್ತು ಎನ್ ಟಿಪಿಸಿ ಷೇರು ನಷ್ಟ ಕಂಡಿದೆ.
ಗುರುವಾರ(ನ.11) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 433.13 ಅಂಕ ಕುಸಿದಿದ್ದು, 59,919.69 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 143.60 ಅಂಕಗಳಷ್ಟು ಇಳಿಕೆಯಾಗಿದ್ದು, 17,873.60 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.