ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಪಾಸಿಟಿವ್ ಟ್ರೆಂಡ್ ಪರಿಣಾಮ ಬುಧವಾರ(ಡಿಸೆಂಬರ್ 22) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಆರಂಭಿಸಿದೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಗಳಲ್ಲಿ 6,317 ಕೋವಿಡ್ ಪ್ರಕರಣ ಪತ್ತೆ,ಒಮಿಕ್ರಾನ್ ಸಂಖ್ಯೆ 213ಕ್ಕೆ ಏರಿಕೆ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 449.23 ಅಂಕಗಳಷ್ಟು ಏರಿಕೆಯಾಗಿದ್ದು, 56,768.24 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 134.95 ಅಂಕ ಏರಿಕೆಯೊಂದಿಗೆ 16,905.80 ಅಂಕಗಳ ಮಟ್ಟ ತಲುಪಿದೆ.
ಇಂಡಸ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಸ್ಟೀಲ್ ಮತ್ತು ಮಹೀಂದ್ರ ಆ್ಯಂಡ್ ಮಹೀಂದ್ರ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್, ವಿಪ್ರೋ ಮತ್ತು ನೆಸ್ಲೆ ಇಂಡಿಯಾ ಷೇರುಗಳು ನಷ್ಟ ಕಂಡಿದೆ.
ಮಂಗಳವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 497 ಅಂಕ ಏರಿಕೆಯೊಂದಿಗೆ 56,319.01 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 156.65 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು.