ಮುಂಬಯಿ: ಕೋವಿಡ್ ನ ರೂಪಾಂತರ ತಳಿ ಒಮಿಕ್ರಾನ್ ಭಾರತದಲ್ಲಿ ಈವರೆಗೂ ಪತ್ತೆಯಾಗಿಲ್ಲದ ಪರಿಣಾಮ ಮಂಗಳವಾರ(ನವೆಂಬರ್ 30) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕಗಳಷ್ಟು ಏರಿಕೆ ಕಂಡಿದ್ದು, ಮತ್ತೆ ಹೂಡಿಕೆದಾರರಲ್ಲಿ ಹುಮ್ಮಸ್ಸು ಮೂಡಿಸಿದೆ.
ಇದನ್ನೂ ಓದಿ:ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿಯೇ 504.75 ಅಂಕ ಏರಿಕೆಯಾಗಿದ್ದು, 57,765.33 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 149.65 ಅಂಕ ಏರಿಕೆಯೊಂದಿಗೆ 17,203.60 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಪವರ್ ಗ್ರಿಡ್, ಆ್ಯಕ್ಸಿಸ್ ಬ್ಯಾಂಕ್, ಟೆಕ್ ಮಹೀಂದ್ರ, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಎಸ್ ಬಿಐ, ಟಿಸಿಎಸ್ ಮತ್ತು ಇನ್ಫೋಸಿಸ್ ಷೇರುಗಳು ಶೇ.5ರಷ್ಟು ಲಾಭಗಳಿಸಿದೆ. ಮತ್ತೊಂದೆಡೆ ಡಾ.ರೆಡ್ಡೀಸ್ ಷೇರುಗಳು ಮಾತ್ರ ನಷ್ಟ ಕಂಡಿದೆ.
ಸೋಮವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 153.43 ಅಂಕ ಏರಿಕೆಯಾಗಿದ್ದು, 57,260.58 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ಎನ್ ಎಸ್ ಇ ನಿಫ್ಟಿ 27.50 ಅಂಕ ಏರಿಕೆಯಾಗಿದ್ದು, 17,053.95 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು.