ಮುಂಬಯಿ: ಮುಂಬಯಿ ಷೇರುಪೇಟೆ ಶುಕ್ರವಾರ (ಸೆಪ್ಟೆಂಬರ್ 03) ಸಾರ್ವಕಾಲಿಕ ಗರಿಷ್ಠ ಅಂಕಗಳಲ್ಲಿ ವಹಿವಾಟನ್ನು ಅಂತ್ಯಗೊಳಿಸಿದೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 277 ಅಂಕ ಏರಿಕೆಯೊಂದಿಗೆ ದಾಖಲೆಯ 58,130 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಸರ್ಕಾರ ರಚನೆಗೂ ಮುನ್ನಾ ವಿದೇಶಗಳೊಂದಿಗೆ ಬೆಂಬಲ ಯಾಚಿಸಿದ ತಾಲಿಬಾನ್!ಚೀನಾದೊಂದಿಗೂ ಒಪ್ಪಂದ.?
ಎನ್ ಎಸ್ ಇ ನಿಫ್ಟಿ ಕೂಡಾ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 17,320 ಅಂಕಗಳೊಂದಿಗೆ ದಾಖಲೆಯ ವಹಿವಾಟು ನಡೆಸಿದೆ. ಇಂದು ಬೆಳಗ್ಗೆಯೂ ಷೇರುಪೇಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಸೆನ್ಸೆಕ್ಸ್ ಸೂಚ್ಯಂಕ 250ಕ್ಕೂ ಅಧಿಕ ಅಂಕ ಏರಿಕೆ ಕಂಡಿತ್ತು.
ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆಯಿಂದ ರಿಲಯನ್ಸ್ ಇಂಡಸ್ಟ್ರೀಸ್, ಟೈಟಾನ್ ಕಂಪನಿ, ಬಜಾಜ್ ಆಟೋ, ಟಾಟಾ ಸ್ಟೀಲ್, ಮಾರುತಿ ಸುಜುಕಿ, ಡಾ.ರೆಡ್ಡೀಸ್ ಲ್ಯಾಬೋರೇಟರಿ, ಏಷ್ಯನ್ ಪೇಂಟ್ಸ್ ಷೇರುಗಳು ಶೇ.4ಕ್ಕಿಂತಲೂ ಅಧಿಕ ಲಾಭಗಳಿಸಿದೆ.
ಭಾರ್ತಿ ಏರ್ ಟೆಲ್, ಎಚ್ ಯುಎಲ್, ಎಚ್ ಡಿಎಫ್ ಸಿ ಬ್ಯಾಂಕ್, ಎಚ್ ಡಿಎಫ್ ಸಿ, ಇಂಡಸ್ ಇಂಡ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ. ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ 58 ಸಾವಿರ ಅಂಕಗಳ ಗಡಿ ದಾಟುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.