ಮುಂಬಯಿ: ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಮತ್ತು ಅಮೆರಿಕದ ಫೆಡರಲ್ ರಿಸರ್ವ್ ನೀತಿಯಲ್ಲಿನ ಬಿಗಿ ಹಿಡಿತದ ಪರಿಣಾಮ ಷೇರು ಹೂಡಿಕೆದಾರರ ಮೇಲೆ ಪ್ರಭಾವ ಬೀರಿದ್ದು, ಶುಕ್ರವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಹೈಕೋರ್ಟ್ ವಿಚಾರಣೆ ಸೋಮವಾರಕ್ಕೆ: ಹಿಜಾಬ್ ಇಸ್ಲಾಂನ ಅತ್ಯಗತ್ಯವಲ್ಲ; ಸರಕಾರದ ವಾದ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 59.04 ಅಂಕಗಳಷ್ಟು ಇಳಿಕೆಯೊಂದಿಗೆ 57,832.97 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 28.30 ಅಂಕ ಕುಸಿದಿದ್ದು, 17,276.30 ಅಂಕಗಳ ಮಟ್ಟ ತಲುಪಿದೆ.
ಒಎನ್ ಜಿಸಿ, ಡಿವೀಸ್ ಲ್ಯಾಬ್ಸ್, ಆಲ್ಟ್ರಾ ಟೆಕ್ ಸಿಮೆಂಟ್, ಟ್ರೈಡೆಂಟ್, ಸಿಪ್ಲಾ ಮತ್ತು ಶ್ರೀ ಸಿಮೆಂಟ್ಸ್ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಕೋಲ್ ಇಂಡಿಯಾ, ಎಸ್ ಬಿಐ ಲೈಫ್ ಇನ್ಸೂರೆನ್ಸ್, ಎಚ್ ಡಿಎಫ್ ಸಿ, ಬಜಾಜ್ ಆಟೋ ಮತ್ತು ಎಲ್ ಆ್ಯಂಡ್ ಟಿ ಷೇರುಗಳು ಲಾಭ ಗಳಿಸಿದೆ.
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 104.67 ಅಂಕಗಳಷ್ಟು ಇಳಿಕೆಯಾಗಿದ್ದು, 57,892.01 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 17.60 ಅಂಕಗಳಷ್ಟು ಕುಸಿತ ಕಂಡಿದ್ದು, 17,304.60 ಅಂಕಗಳಲ್ಲಿ ಕೊನೆಗೊಂಡಿತ್ತು.