ಮುಂಬಯಿ: ಮುಂಬಯಿ ಷೇರುಪೇಟೆಯ ವಹಿವಾಟು ಸತತ ಎರಡನೇ ದಿನವಾದ ಗುರುವಾರ(ಆಗಸ್ಟ್ 05) ಕೂಡಾ 123.07 ಅಂಕಗಳಷ್ಟು ಏರಿಕೆಯೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಅಲ್ಲದೇ ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಕುಸ್ತಿಪಟು ರವಿ ಕುಮಾರ್ ದಹಿಯಾ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 123.07 ಅಂಕಗಳ ಏರಿಕೆಯೊಂದಿಗೆ ಸಾರ್ವಕಾಲಿಕ ದಾಖಲೆಯ 54,717.24 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 35.80 ಅಂಕ ಏರಿಕೆಯೊಂದಿಗೆ ದಾಖಲೆಯ 16,294.60ರ ಗಡಿ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ಏರಿಕೆಯ ಪರಿಣಾಮ ಭಾರ್ತಿ ಏರ್ ಟೆಲ್, ಐಟಿಸಿ, ಟೆಕ್ ಮಹೀಂದ್ರಾ, ಟಾಟಾ ಸ್ಟೀಲ್ ಮತ್ತು ಎಚ್ ಸಿಎಲ್ ಟೆಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಎಸ್ ಬಿಐ, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫೈನಾನ್ಸ್, ಐಸಿಐಸಿಐ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ದಾಖಲೆಯ ಏರಿಕೆಯ ಪರಿಣಾಮ ಹೂಡಿಕೆದಾರರಿಗೆ ಲಕ್ಷಾಂತರ ಕೋಟಿ ರೂಪಾಯಿ ಲಾಭವಾಗಿದ್ದು, ದೇಶೀಯ ಐಟಿ ಮತ್ತು ಮೆಟಲ್ ಷೇರುಗಳು ಕೂಡಾ ಹೆಚ್ಚಿನ ಲಾಭಾಂಶ ಕಂಡಿರುವುದಾಗಿ ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.