ಮುಂಬಯಿ: ರಷ್ಯಾ, ಉಕ್ರೇನ್ ನಡುವಿನ ಯುದ್ಧ ತೀವ್ರಗೊಂಡಿದ್ದು ಹಾಗೂ ಏಷಿಯನ್ ಮಾರುಕಟ್ಟೆಯಲ್ಲಿನ ನೀರಸ ವಹಿವಾಟಿನ ಪರಿಣಾಮ ಸೋಮವಾರ (ಏಪ್ರಿಲ್ 18) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 1,186 ಅಂಕಗಳಷ್ಟು ಭಾರೀ ಕುಸಿತ ಕಂಡಿದೆ.
ಇದನ್ನೂ ಓದಿ:ಅಪ್ಪು ಮತ್ತೆ ಹುಟ್ಟಿ ಬರಲಿ, RCB ಕಪ್ ಗೆಲ್ಲಲಿ: ಸಿಡಿ ಮಹೋತ್ಸವದಲ್ಲಿ ಅಭಿಮಾನಿಗಳ ಬೇಡಿಕೆ
ಮಹಾವೀರ ಜಯಂತಿ ಮತ್ತು ಡಾ.ಬಿಆರ್ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಷೇರು ಪೇಟೆ ವಹಿವಾಟು ಬಂದ್ ಆಗಿತ್ತು.
ಸೋಮವಾರ ಮುಂಬಯಿ ಷೇರುಪೇಟೆಯ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 1,186.18 ಅಂಕ ಇಳಿಕೆಯಾಗಿದ್ದು, 57, 152.75 ಅಂಕದಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 314. 95 ಅಂಕ ಕುಸಿತ ಕಂಡಿದ್ದು, 17,160.70 ಅಂಕದಲ್ಲಿ ವಹಿವಾಟು ಮುಂದುವರಿದಿದೆ.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭಾರೀ ಕುಸಿತದ ನಡುವೆಯೂ ಎನ್ ಟಿಪಿಸಿ, ಟಾಟಾ ಸ್ಟೀಲ್, ಮಹೀಂದ್ರ ಆ್ಯಂಡ್ ಮಹೀಂದ್ರ, ಪವರ್ ಗ್ರಿಡ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಇನ್ಫೋಸಿಸ್, ಟೆಕ್ ಮಹೀಂದ್ರ, ಟಿಸಿಎಸ್, ಎಚ್ ಡಿಎಫ್ ಸಿ, ವಿಪ್ರೋ ಮತ್ತು ಎಚ್ ಸಿಎಲ್ ಟೆಕ್ನಾಲಜೀಸ್ ಷೇರುಗಳು ಭಾರೀ ನಷ್ಟ ಕಂಡಿದೆ.
ಬುಧವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 237.44 ಅಂಕ ಕುಸಿತ ಕಂಡಿದ್ದು, 58,338.93 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 54.65 ಅಂಕ ಇಳಿಕೆಯೊಂದಿಗೆ 17,475.65 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು.