ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ದುರ್ಬಲ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 500 ಅಂಕಗಳಷ್ಟು ಇಳಿಕೆಯಾಗಿದ್ದು, ಏಷ್ಯಾ ಮಾರುಕಟ್ಟೆಯಲ್ಲಿಯೂ ಸೋಮವಾರ(ಜೂನ್ 21) ಷೇರುವಹಿವಾಟು ಕಡಿಮೆ ಪ್ರಮಾಣದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಾಪು: ಟರ್ಪಾಲಿನ ಮನೆಯಲ್ಲಿ ನಾಲ್ಕು ಮಂದಿ ವಾಸ, ಅಸಹಾಯಕತೆಯ ನಡುವೆಯೇ ಸಂಕಷ್ಟದ ಜೀವನ
ಇಂದು ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್ ಇ ಸಂವೇದಿ ಸೂಚ್ಯಂಕ 380.55ಕ್ಕೂ ಅಧಿಕ ಅಂಕಗಳ ಕುಸಿತ ಕಂಡಿದ್ದು, 51,981.75 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 112 ಅಂಕ ಇಳಿಕೆಯಾಗಿದ್ದು, 15,574.45ರ ಗಡಿಗೆ ಕುಸಿದಿದೆ.
ಸೆನ್ಸೆಕ್ಸ್ ಕುಸಿತದಿಂದ ಮಹೀಂದ್ರ ಆ್ಯಂಡ್ ಮಹೀಂದ್ರ, ಐಸಿಐಸಿಐ ಬ್ಯಾಂಕ್, ಆಲ್ಟ್ರಾಟೆಕ್ ಸಿಮೆಂಟ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಭಾರೀ ನಷ್ಟ ಅನುಭವಿಸಿದೆ. ಮತ್ತೊಂದೆಡೆ ಎನ್ ಟಿಪಿಸಿ, ಎಚ್ ಯುಎಲ್, ಏಷ್ಯನ್ ಪೇಂಟ್ಸ್, ಸನ್ ಫಾರ್ಮಾ ಷೇರುಗಳು ಲಾಭ ಗಳಿಸಿದೆ.
ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ನಷ್ಟ ಅನುಭವಿಸಿದ್ದು, ನಂತರ ವಹಿವಾಟಿನಲ್ಲಿ ಅಲ್ಪ ಪ್ರಮಾಣದ ಚೇತರಿಕೆ ಕಂಡುಬಂದಿರುವುದಾಗಿ ವರದಿ ತಿಳಿಸಿದೆ. ಸೆನ್ಸೆಕ್ಸ್ ಇಳಿಕೆಯಿಂದ ಆಟೋ ಮತ್ತು ಫೈನಾಶ್ಶಿಯಲ್ ಷೇರುಗಳು ಭಾರೀ ನಷ್ಟ ಅನುಭವಿಸಿದೆ.