ಮುಂಬಯಿ: ಆರ್ಥಿಕ ಹಿಂಜರಿಕೆಯ ಭೀತಿಯ ಹಿನ್ನೆಲೆಯಲ್ಲಿ ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಬುಧವಾರ (ಜೂನ್ 22) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 700ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಅಮೆರಿಕಾದಲ್ಲಿ ಗುಂಡೇಟು ತಗುಲಿ ಭಾರತೀಯ ಮೂಲದ ಯುವಕ ನಿಗೂಢ ಸಾವು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 709.54 ಅಂಕಗಳಷ್ಟು ಇಳಿಕೆಯಾಗಿದ್ದು, 51,822.53 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 225.50 ಅಂಕ ಕುಸಿತಗೊಂಡಿದ್ದು, 15,413.30 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಹಿಂಡಲ್ಕೋ ಇಂಡಸ್ಟ್ರೀಸ್, ಯುಪಿಎಲ್, ಟಾಟಾ ಸ್ಟೀಲ್, ಜೆಎಸ್ ಡಬ್ಲ್ಯು ಸ್ಟೀಲ್, ವಿಪ್ರೋ ಷೇರುಗಳು ಭಾರೀ ನಷ್ಟ ಕಂಡಿದೆ. ಮತ್ತೊಂದೆಡೆ ಬಿಪಿಸಿಎಲ್, ಹೀರೊ ಮೋಟೊ ಕಾರ್ಪ್, ಟಿಸಿಎಸ್, ಮಾರುತಿ ಸುಜುಕಿ ಮತ್ತು ಪವರ್ ಗ್ರಿಡ್ ಕಾರ್ಪೋರೇಶನ್ ಷೇರುಗಳು ಲಾಭಗಳಿಸಿದೆ.
ತೈಲ ಬೆಲೆ ಹೆಚ್ಚಳ, ಬಡ್ಡಿದರ ಹೆಚ್ಚಳ ಹಾಗೂ ಆರ್ಥಿಕ ಹಿಂಜರಿಕೆಯ ಭೀತಿ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದ್ದು, ಜಾಗತಿಕ ಹಾಗೂ ದೇಶೀಯ ಷೇರುಮಾರುಕಟ್ಟೆ ವಹಿವಾಟಿನ ಮೇಲೆ ಹೊಡೆತ ಬೀಳುವಂತಾಗಿದೆ ಎಂದು ವರದಿ ವಿಶ್ಲೇಷಿಸಿದೆ.