ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಮುಂಬಯಿ ಷೇರು ಮಾರುಕಟ್ಟೆ ಮೇಲೂ ಬೀರಿದ್ದು, ಸತತ ಎರಡನೇ ಅವಧಿಯಲ್ಲಿಯೂ ಸಂವೇದಿ ಸೂಚ್ಯಂಕ 1,128 ಅಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ರಂಗೇರಿದ ಪ್ರಚಾರ: ಅಸ್ಸಾಂ ಚುನಾವಣಾ ಅಖಾಡದಲ್ಲಿ 264 ಅಭ್ಯರ್ಥಿಗಳು ಕೋಟ್ಯಧಿಪತಿಗಳು!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬರೋಬ್ಬರಿ 1,128.08 ಅಂಕ ಏರಿಕೆಯಾಗಿ 50,136.58 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 337.80 ಅಂಕ ಏರಿಕೆಯಾಗಿ 14,845.10ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ಎಚ್ ಸಿಎಲ್ ಷೇರುಗಳು ಹೆಚ್ಚಿನ ಲಾಭ ಗಳಿಸಿದ್ದು, ಇನ್ನುಳಿದಂತೆ ಎಚ್ ಡಿಎಫ್ ಸಿ ಬ್ಯಾಂಕ್, ಇನ್ಫೋಸಿಸ್, ಎನ್ ಟಿಪಿಸಿ, ನೆಸ್ಲೆ ಇಂಡಿಯಾ, ಟಿಸಿಎಸ್ ಮತ್ತು ಎಚ್ ಯುಎಲ್ ಷೇರುಗಳು ಶೇ.4ರಷ್ಟು ಲಾಭ ಗಳಿಸಿದೆ.
ಏತನ್ಮಧ್ಯೆ ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಭಾರ್ತಿ ಏರ್ ಟೆಲ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ. ಕೋವಿಡ್ 19 ಸೋಂಕು ಪ್ರಕರಣಗಳ ಹೆಚ್ಚಳದ ನಡುವೆಯೂ ಷೇರುಮಾರುಕಟ್ಟೆಯಲ್ಲಿ ಹೂಡಿಕೆದಾರರು ಷೇರು ಖರೀದಿ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದರು.