ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 359 ಅಂಕಗಳಷ್ಟು ಏರಿಕೆಯೊಂದಿಗೆ ಗುರುವಾರ(ಜೂನ್ 10) ದಿನಾಂತ್ಯದ ವಹಿವಾಟನ್ನು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ವಿಚಾರಣೆ ಜೂ.11ಕ್ಕೆ ಮುಂದೂಡಿದ ಡೊಮಿನಿಕಾ ಹೈಕೋರ್ಟ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 358.83 ಅಂಕಗಳ ಏರಿಕೆಯೊಂದಿಗೆ 52,300.47 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 102,40 ಅಂಕಗಳ ಏರಿಕೆಯೊಂದಿಗೆ 15,737.75ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಎಸ್ ಬಿಐ, ಇಂಡಸ್ ಇಂಡ್ ಬ್ಯಾಂಕ್, ಡಾ.ರೆಡ್ಡೀಸ್, ಟೆಕ್ ಮಹೀಂದ್ರಾ, ಐಟಿಸಿ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಬಜಾಜ್ ಆಟೋ, ಮಾರುತಿ, ಎಚ್ ಸಿಎಲ್ ಟೆಕ್, ಆಲ್ಟ್ರಾ ಟೆಕ್ ಸಿಮೆಂಟ್, ಪವರ್ ಗ್ರಿಡ್, ಒಎನ್ ಜಿಸಿ ಮತ್ತು ನೆಸ್ಲೆ ಷೇರುಗಳು ನಷ್ಟ ಅನುಭವಿಸಿದೆ.
ಕೋವಿಡ್ 19 ಎರಡನೇ ಅಲೆಯ ಪ್ರಕರಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳು ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಕೆ ಮಾಡಿವೆ. ಅಲ್ಲದೇ ದೇಶದ ಪ್ರತಿಯೊಬ್ಬರಿಗೆ ಉಚಿತ ಲಸಿಕೆ ಮತ್ತು ಫಲಾನುಭವಿಗಳಿಗೆ ಪಡಿತರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಇದರಿಂದ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.