Advertisement

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 462 ಅಂಕ ಜಿಗಿತ; ವಾರಾಂತ್ಯದ ವಹಿವಾಟು ಅಂತ್ಯ

05:20 PM Jun 24, 2022 | Team Udayavani |

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಶುಕ್ರವಾರ (ಜೂನ್ 24) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 462 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು.

Advertisement

ಇದನ್ನೂ ಓದಿ:ಮಹಾರಾಷ್ಟ್ರ ಬಿಕ್ಕಟ್ಟು-ಶಿಂಧೆ ಗುಂಪಿಗೆ ಶಾಸಕರ ಸೇರ್ಪಡೆ, ಶಿವಸೇನಾಗೆ ಭಾರೀ ಮುಖಭಂಗ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 452.26 ಅಂಕ ಏರಿಕೆಯೊಂದಿಗೆ 52,727.98 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 142.60 ಅಂಕ ಏರಿಕೆಯಾಗಿದ್ದು, 15,699.30 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಸೆನ್ಸೆಕ್ಸ್ ಏರಿಕೆಯಿಂದ ಮಹೀಂದ್ರ ಆ್ಯಂಡ್ ಮಹೀಂದ್ರ, ಹೀರೊ ಮೋಟೊ ಕಾರ್ಪ್, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಎಚ್ ಯುಎಲ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟೆಕ್ ಮಹೀಂದ್ರ, ಇನ್ಫೋಸಿಸ್, ಟಿಸಿಎಸ್, ಎಚ್ ಸಿಎಲ್ ಟೆಕ್ನಾಲಜೀಸ್, ಕೋಲ್ ಇಂಡಿಯಾ ಷೇರುಗಳು ನಷ್ಟ ಕಂಡಿದೆ.

ಕಚ್ಛಾ ತೈಲದ ಬೆಲೆ 0.54ರಷ್ಟು ಇಳಿಕೆಯಾಗಿದ್ದು, ಪ್ರತಿ ಬ್ಯಾರೆಲ್ ಬೆಲೆ 8,178 ರೂಪಾಯಿ ಆಗಿದ್ದು, ಜಾಗತಿಕ ಷೇರುಪೇಟೆಯಲ್ಲಿ ವಹಿವಾಟಿನ ಮೇಲೆ ಪರಿಣಾಮ ಬೀರುವಂತೆ ಮಾಡಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next