ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಸೋಮವಾರ (ಜುಲೈ 18) ಬಾಂಬೆ ಷೇರುಪೇಟೆಯ ಆರಂಭಿಕ ಹಂತದಲ್ಲಿ ಸೆನ್ಸೆಕ್ಸ್ 500 ಅಂಕಗಳ ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ವಿಚಿತ್ರ ಕೆಲಸ ಮಾಡುತ್ತಿದ್ದಾನೆ ಈ ಯುವಕ: 1 ಗಂಟೆಗೆ 7,000 ರೂ. ಸಂಬಳ!
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 500.49 ಅಂಕಗಳಷ್ಟು ಏರಿಕೆಯೊಂದಿಗೆ 54,224.40 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎಸ್ ಎಸ್ ಇ ನಿಫ್ಟಿ ಕೂಡಾ 139.70 ಅಂಕಗಳಷ್ಟು ಏರಿಕೆಯಾಗಿದ್ದು, 16,188.90 ಅಂಕಗಳಲ್ಲಿ ವಹಿವಾಟು ನಡೆದಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಇನ್ಫೋಸಿಸ್, ಹಿಂಡಾಲ್ಕೊ ಇಂಡಸ್ಟ್ರೀಸ್, ಎಲ್ ಆ್ಯಂಡ್ ಟಿ, ಟೆಕ್ ಮಹೀಂದ್ರ ಮತ್ತು ಬಜಾಜ್ ಫಿನ್ ಸರ್ವ್, ಐಟಿ, ಮೆಟಲ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಎಚ್ ಡಿಎಫ್ ಸಿ, ಎಚ್ ಡಿಎಫ್ ಸಿ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಬ್ರಿಟಾನಿಯಾ ಇಂಡಸ್ಟ್ರಿಸ್ ಷೇರುಗಳು ನಷ್ಟ ಕಂಡಿದೆ.
ಬಿಇಎಲ್ ಷೇರು ದರ ಶೇ.4ರಷ್ಟು ಹೆಚ್ಚಳವಾಗಿದ್ದು, ಇದರಿಂದಾಗಿ ಬಿಇಎಲ್ ಕಂಪನಿಯ 2023ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದ ವರದಿಯಲ್ಲಿ 431.49 ಕೋಟಿ ರೂಪಾಯಿ ಲಾಭಗಳಿಸಿದೆ. ಇದು ಕಳೆದ ವರ್ಷಕ್ಕಿಂತ 11.15 ಕೋಟಿ ರೂಪಾಯಿಯಷ್ಟು ಹೆಚ್ಚಿನ ಆದಾಯ ಗಳಿಸಿದಂತಾಗಿದೆ ಎಂದು ತಿಳಿಸಿದೆ.