ಮುಂಬಯಿ: ಅಮೆರಿಕದ ಫೆಡರಲ್ ರಿಸರ್ವ್ ನೀತಿ ಮಾರ್ಚ್ ನಿಂದ ಇನ್ನಷ್ಟು ಕಠಿಣವಾಗಲಿದೆ ಎಂಬ ಮುನ್ಸೂಚನೆ ಹಾಗೂ ಜಾಗತಿಕ ಷೇರು ಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಗುರುವಾರ (ಜನವರಿ 27) ಮುಂಬುಇ ಷೇರುಪೇಟೆಯ ಸಂವೇದಿ ಸೂಚ್ಯಂಕ 581 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 581.21 ಅಂಕಗಳಷ್ಟು ಇಳಿಕೆಯಾಗಿದ್ದು, 57,267.94 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 167.80 ಅಂಕ ಕುಸಿದಿದ್ದು, 17,110.10 ಅಂಕಗಳ ಮಟ್ಟ ತಲುಪಿದೆ.
ಸೆನ್ಸೆಕ್ಸ್ ಕುಸಿತದಿಂದ ಎಚ್ ಸಿಎಲ್ ಟೆಕ್ ಷೇರು ಭಾರೀ ನಷ್ಟ ಕಂಡಿದೆ. ಇನ್ನುಳಿದಂತೆ ಟೆಕ್ ಮಹೀಂದ್ರ, ಡಾ.ರೆಡ್ಡೀಸ್, ವಿಪ್ರೋ, ಟಿಸಿಎಸ್, ಟೈಟಾನ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ.
ಆ್ಯಕ್ಸಿಸ್ ಬ್ಯಾಂಕ್, ಎಸ್ ಬಿಐ, ಮಾರುತಿ, ಕೋಟಕ್ ಬ್ಯಾಂಕ್, ಸಿಪ್ಲಾ, ಐಒಸಿ, ಬಜಾಜ್ ಆಟೋ, ಟಾಟಾ ಮೋಟಾರ್ಸ್, ಸನ್ ಫಾರ್ಮಾ, ಇಂಡಸ್ ಇಂಡ್ ಬ್ಯಾಂಕ್. ಮಹೀಂದ್ರ ಆ್ಯಂಡ್ ಮಹೀಂದ್ರಾ, ಒಎನ್ ಜಿಸಿ, ಐಟಿಸಿ, ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿದೆ.
ಹಣದುಬ್ಬರ ನಿಯಂತ್ರಿಸುವ ನಿಟ್ಟಿನಲ್ಲಿ ಬಡ್ಡಿ ದರ ಹೆಚ್ಚಳಗೊಳಿಸುವ ಬಗ್ಗೆ ಅಮೆರಿಕ ಫೆಡರಲ್ ರಿಸರ್ವ್ ಬುಧವಾರ ಮುನ್ಸೂಚನೆ ನೀಡಿದ್ದ ಪರಿಣಾಮ ಇಂದು ಷೇರುಪೇಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.