ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯ ನೀರಸ ವಹಿವಾಟಿನ ಪರಿಣಾಮ ಸೋಮವಾರ (ಜೂನ್ 06) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 93.91 ಅಂಕಗಳಷ್ಟು ಅಲ್ಪ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ಯಾವುದೇ ರೀತಿಯಲ್ಲಿ ನಾವು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ: ಯಡಿಯೂರಪ್ಪ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 93.91 ಅಂಕಗಳಷ್ಟು ಇಳಿಕೆಯಾಗಿದ್ದು, 55,675.32 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 18.50 ಅಂಕ ಇಳಿಕೆಯೊಂದಿಗೆ 16,565.89 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್ ಅಲ್ಪ ಇಳಕೆಯಿಂದ ಟಾಟಾ ಸ್ಟೀಲ್, ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಶ್ರೀ ಸಿಮೆಂಟ್, ಏಷಿಯನ್ ಪೇಂಟ್ಸ್ ಮತ್ತು ಬಿಪಿಸಿಎಲ್ ಷೇರುಗಳು ನಷ್ಟ ಕಂಡಿದೆ.
ಹಣದುಬ್ಬರ ಹೆಚ್ಚಳ, ಕೋವಿಡ್ ತಡೆಗಾಗಿ ಚೀನಾ ಕೈಗೊಳ್ಳಲಿರುವ ಹೊಸ ಕ್ರಮಗಳ ನಿಟ್ಟಿನಲ್ಲಿ ಹೂಡಿಕೆದಾರರು ವಹಿವಾಟಿನಲ್ಲಿ ಹೆಚ್ಚಿನ ಆಸಕ್ತಿ ತೋರಿಸದ ಕಾರಣ ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಶಾಂಘೈ, ಆಸ್ಟ್ರೇಲಿಯಾ ಷೇರುಪೇಟೆ ಸೆನ್ಸೆಕ್ಸ್ ಇಳಿಕೆ ಕಂಡಿದೆ.