ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಗುರುವಾರ(ಜನವರಿ 06) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 872 ಅಂಕಗಳಷ್ಟು ಇಳಿಕೆಯೊಂದಿಗೆ ದಿನದ ವಹಿವಾಟು ಆರಂಭಿಸಿದೆ.
ಇದನ್ನೂ ಓದಿ:ಮತ್ತೊಂದು ‘ಬಿಟ್’ ಅಕ್ರಮ: ಬಿಟ್‌ಕಾಯಿನ್ ಮೂಲಕ 13 ಲಕ್ಷ ರೂ. ವಂಚನೆ ಪ್ರಕರಣ ಬೆಳಕಿಗೆ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಇಂದು ಬೆಳಗ್ಗೆ 872.80 ಅಂಕಗಳಷ್ಟು ಕುಸಿತಗೊಂಡಿದ್ದು, 59,350.35 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 253.70 ಅಂಕಗಳಷ್ಟು ಇಳಿಕೆಯಾಗಿದ್ದು, 17,671.60 ಅಂಕಗಳ ಮಟ್ಟಕ್ಕೆ ಕುಸಿದಿದೆ.
ಭಾರ್ತಿ ಏರ್ ಟೆಲ್, ಮಾರುತಿ ಸುಜುಕಿ ಇಂಡಿಯಾ, ಬಜಾಜ್ ಆಟೋ ಲಿಮಿಟೆಡ್, ಟಾಟಾ ಮೋಟಾರ್ಸ್ ಲಿಮಿಟೆಡ್, ಕೋಲ್ ಇಂಡಿಯಾ ಲಿಮಿಟೆಡ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಇನ್ಫೋಸಿಸ್, ಅದಾನಿ ಪೋರ್ಟ್ಸ್, ಕೋಟಕ್ ಮಹೀಂದ್ರ, ರಿಲಯನ್ಸ್ ಇಂಡಸ್ಟ್ರೀಸ್, ಟಿಸಿಎಸ್, ಎನ್ ಟಿಪಿಸಿ ಲಿಮಿಟೆಡ್, ಎಚ್ ಡಿಎಫ್ ಸಿ ಬ್ಯಾಂಕ್, ಪವರ್ ಗ್ರಿಡ್, ಎಲ್ ಆ್ಯಂಡ್ ಟಿ, ಟಾಟಾ ಸ್ಟೀಲ್ ಲಿ, ವಿಪ್ರೋ ಲಿಮಿಟೆಡ್ ಷೇರುಗಳು ನಷ್ಟ ಕಂಡಿದೆ.
ಬುಧವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 367.22 ಅಂಕಗಳಷ್ಟು ಏರಿಕೆಯೊಂದಿಗೆ 60,223.15 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 120 ಅಂಕಗಳಷ್ಟು ಏರಿಕೆಯಾಗಿದ್ದು, 17,925.25 ಅಂಕಗಳ ಗಡಿ ತಲುಪಿತ್ತು.