ಮುಂಬಯಿ:ಜಾಗತಿಕ ಷೇರುಮಾರುಕಟ್ಟೆಯಲ್ಲಿನ ನೆಗೆಟಿವ್ ವಹಿವಾಟಿನ ನಂತರವೂ ಗುರುವಾರ (ಡಿಸೆಂಬರ್ 02) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 777 ಅಂಕಗಳ ಭರ್ಜರಿ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 776.50 ಅಂಕಗಳು ಏರಿಕೆಯಾಗಿದ್ದು, 58,461.29 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 234.75 ಅಂಕ ಏರಿಕೆಯೊಂದಿಗೆ 17,401.65 ಅಂಕಗಳ ಗಡಿ ತಲುಪಿದೆ.
ಎಚ್ ಡಿಎಫ್ ಸಿ, ಪವರ್ ಗ್ರಿಡ್, ಸನ್ ಫಾರ್ಮಾ, ಟಾಟಾ ಸ್ಟೀಲ್, ಟೆಕ್ ಮಹೀಂದ್ರ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 214.43 ಅಂಕಗಳು ಏರಿಕೆಯಾಗಿದ್ದು, 57,899.22 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 53.95 ಅಂಕ ಏರಿಕೆ ಕಂಡಿದ್ದು, 17,220.85 ಅಂಕಗಳ ಮಟ್ಟ ತಲುಪಿತ್ತು.