ಮುಂಬೈ: ಅಮೆರಿಕದ ಹಣದುಬ್ಬರದ ಪಾಸಿಟಿವ್ ಅಂಕಿಅಂಶದ ಹಿನ್ನೆಲೆಯಲ್ಲಿ ಜಾಗತಿಕ ಷೇರುಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟು ನಡೆದಿದ್ದು, ಗುರುವಾರ (ಆಗಸ್ಟ್ 11) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 515 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 515 ಅಂಕಗಳಷ್ಟು ಏರಿಕೆಯೊಂದಿಗೆ 59,332 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 124 ಅಂಕಗಳಷ್ಟು ಏರಿಕೆಯಾಗಿದ್ದು, 17,659 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫೈನಾನ್ಸ್, ವಿಪ್ರೋ, ಐಸಿಐಸಿಐ ಬ್ಯಾಂಕ್, ಟೆಕ್ ಮಹೀಂದ್ರ ಮತ್ತು ಎಚ್ ಡಿಎಫ್ ಸಿ ಷೇರುಗಳು ಲಾಭಗಳಿಸಿದೆ.
ಬುಧವಾರ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 465.14 ಅಂಕಗಳಷ್ಟು ಏರಿಕೆಯೊಂದಿಗೆ 58,853.07 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 126.10 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು.