ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 1,041.08 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಪಿಎಸ್ಐ ಅಕ್ರಮ : ಕೊನೆಗೂ ಸಿಐಡಿ ಬಲೆಗೆ ಬಿದ್ದ ಶಾಂತಾಬಾಯಿ ಹಾಗೂ ಪತಿ ಬಸಯ್ಯ ನಾಯ್ಕ್
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,041.08 ಅಂಕಗಳಷ್ಟು ಏರಿಕೆಯೊಂದಿಗೆ 55,925.74 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 308.90 ಅಂಕ ಏರಿಕೆಯಾಗಿದ್ದು, 16,661.40 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್ ಏರಿಕೆಯಿಂದ ಟೈಟಾನ್, ಮಹೀಂದ್ರ ಆ್ಯಂಡ್ ಮಹೀಂದ್ರ, ಇನ್ಫೋಸಿಸ್, ಎಲ್ ಆ್ಯಂಡ್ ಟಿ, ಟೆಕ್ ಮಹೀಂದ್ರ ಮತ್ತು ಎಚ್ ಸಿಎಲ್ ಟೆಕ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ. ಷೇರುಪೇಟೆಯ ಸೆನ್ಸೆಕ್ಸ್ ಏರಿಕೆಯ ಪರಿಣಾಮ ಹೂಡಿಕೆದಾರರಿಗೆ 10 ಲಕ್ಷ ಕೋಟಿಗೂ ಅಧಿಕ ಲಾಭವಾಗಿದೆ ಎಂದು ವರದಿ ತಿಳಿಸಿದೆ.
ಜೆಎಸ್ ಡಬ್ಲ್ಯು ಷೇರುಗಳ ಮೌಲ್ಯ ಶೇ.2ರಷ್ಟು ಇಳಿಕೆಯಾಗಿತ್ತು. ಅದೇ ರೀತಿ ಕೋಟಕ್ ಮಹೀಂದ್ರ, ಸನ್ ಫಾರ್ಮಾ, ಡಿಆರ್ ಎಲ್ ಮತ್ತು ಎನ್ ಟಿಪಿಸಿ ಷೇರುಗಳು ಮೌಲ್ಯ ಕುಸಿತ ಕಂಡಿದೆ. ಮಧ್ಯಂತರ ವಹಿವಾಟಿನಲ್ಲಿ ಡಾ.ಲಾಲ್, ಟೊರೆಂಟ್ ಫಾರ್ಮಾ, ಎನ್ ಎಂಡಿಸಿ, ಅಶೋಕ್ ಲೇಲ್ಯಾಂಡ್ ಷೇರುಗಳ ಮೌಲ್ಯ ಇಳಿಕೆಯಾಗಿತ್ತು.