ನವದೆಹಲಿ:ಜಾಗತಿಕ ಷೇರುಮಾರುಕಟ್ಟೆಯಲ್ಲಿ ನೆಗೆಟಿವ್ ವಹಿವಾಟಿನ ಪರಿಣಾಮದ ನಡುವೆಯೂ ಶುಕ್ರವಾರ(ಜುಲೈ 16) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 100 ಅಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ಏನಪ್ಪಾ ಲೇಟು?…ಅಪ್ಪನಿಗೆ ಪುಟ್ಟ ದೇವತೆ ಬೇಕಿತ್ತು!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಇಂದು ಆರಂಭಿಕ ವಹಿವಾಟಿನಲ್ಲಿ 111.60 ಅಂಕ ಏರಿಕೆಯಾಗಿದ್ದು, 53,270.45 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 33,60 ಅಂಕ ಏರಿಕೆಯಾಗಿ, 15,957.80ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ಐಟಿಸಿ, ಸನ್ ಫಾರ್ಮಾ, ಡಾ.ರೆಡ್ಡೀಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಅಲ್ಲದೇ ಎಚ್ ಸಿಎಲ್ ಟೆಕ್, ಟೆಕ್ ಮಹೀಂದ್ರ, ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್, ಎನ್ ಟಿಪಿಸಿ ಷೇರುಗಳು ನಷ್ಟ ಕಂಡಿದೆ.
ಗುರುವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 254.75 ಅಂಕ ಏರಿಕೆಯೊಂದಿಗೆ 53,158.85 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 70.25 ಅಂಕ ಏರಿಕೆಯೊಂದಿಗೆ 15,924.20ರ ಗಡಿ ದಾಟಿತ್ತು.