ಮುಂಬಯಿ:ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಸೋಮವಾರ(ಜುಲೈ 05) ಆರಂಭಿಕ ವಹಿವಾಟಿನಲ್ಲಿ 200 ಅಂಕಗಳಷ್ಟು ಏರಿಕೆಯಾಗಿದ್ದು, ಇದರ ಪರಿಣಾಮ ಎಚ್ ಡಿಎಫ್ ಸಿ ಬ್ಯಾಂಕ್, ರಿಲಯನ್ಸ್ ಷೇರುಗಳು ಲಾಭ ಗಳಿಸಿದೆ.
ಇದನ್ನೂ ಓದಿ:ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ: ಯತ್ನಾಳ್ ಟೀಕೆ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 211.04 ಅಂಕಗಳಷ್ಟು ಏರಿಕೆಯಾಗಿದ್ದು, 52,695.71 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 65.10 ಅಂಕಗಳ ಏರಿಕೆಯೊಂದಿಗೆ 15,787.30ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯ ಪರಿಣಾಮ ಬಜಾಜ್ ಆಟೋ, ಟಾಟಾ ಸ್ಟೀಲ್, ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಎಚ್ ಡಿಎಫ್ ಸಿ ಬ್ಯಾಂಕ್, ಟಿಸಿಎಸ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭ ಗಳಿಸಿದೆ. ಮತ್ತೊಂದೆಡೆ ಟೆಕ್ ಮಹೇಂದ್ರ, ಡಾ.ರೆಡ್ಡೀಸ್ ಮತ್ತು ಎಚ್ ಡಿಎಫ್ ಸಿ ಷೇರುಗಳು ನಷ್ಟ ಅನುಭವಿಸಿದೆ.
ಮುಂಬಯಿ ಷೇರುಪೇಟೆಯ ಹಿಂದಿನ ವಹಿವಾಟಿನಲ್ಲಿ ಬಿಎಸ್ ಇ ಸಂವೇದಿ ಸೂಚ್ಯಂಕ 166.07 ಅಂಕಗಳಷ್ಟು ಏರಿಕೆಯಾಗಿದ್ದು, 52,484.67 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ 42.20 ಅಂಕ ಏರಿಕೆಯಾಗಿದ್ದು, 15,722.20ರ ಗಡಿ ದಾಟಿತ್ತು.