ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮದ ನಡುವೆಯೂ ಮಂಗಳವಾರ(ಆಗಸ್ಟ್ 10) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 250ಕ್ಕೂ ಹೆಚ್ಚು ಅಂಕ ಏರಿಕೆ ಕಂಡಿದೆ.
ಇದನ್ನೂ ಓದಿ:147 ದಿನಗಳ ಬಳಿಕ ದೇಶದಲ್ಲಿ ಅತೀ ಕಡಿಮೆ ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಭಾರೀ ಇಳಿಕೆ
ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 257.31 ಅಂಕ ಮುನ್ನಡೆಯೊಂದಿಗೆ 54,660.16 ಅಂಕಗಳ ದಾಖಲೆಯ ಮಟ್ಟದಲ್ಲಿ ಆರಂಭಿಕ ವಹಿವಾಟು ನಡೆಸಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 64.05 ಅಂಕ ಏರಿಕೆಯೊಂದಿಗೆ 16,322.30 ಅಂಕಗಳ ಮಟ್ಟದಲ್ಲಿ ವಹಿವಾಟು ಆರಂಭಿಸಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಎಚ್ ಡಿಎಫ್ ಸಿ, ಕೋಟಕ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್, ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್ ಷೇರುಗಳು ಶೇ.2ರಷ್ಟು ಲಾಭ ಗಳಿಸಿದೆ. ಏತನ್ಮಧ್ಯೆ ಪವರ್ ಗ್ರಿಡ್, ಐಟಿಸಿ, ಬಜಾಜ್ ಆಟೋ ಮತ್ತು ನೆಸ್ಲೆ ಷೇರುಗಳು ನಷ್ಟ ಅನುಭವಿಸಿದೆ.
ಸೋಮವಾರ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 125.13 ಅಂಕ ಏರಿಕೆಯೊಂದಿಗೆ 54,402.85 ಅಂಕಗಳ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೂಡಾ 20.05 ಅಂಕ ಏರಿಕೆಯಾಗಿದ್ದು, 16,258.25 ಅಂಕಗಳ ಮಟ್ಟದಲ್ಲಿ ವಹಿವಾಟು ಕೊನೆಗೊಳಿಸಿತ್ತು.