ಮುಂಬಯಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ ಬುಧವಾರ (ಆಗಸ್ಟ್ 18) 250ಕ್ಕೂ ಅಧಿಕ ಅಂಕ ಏರಿಕೆಯೊಂದಿಗೆ ಇದೇ ಮೊದಲ ಬಾರಿಗೆ 56,000 ಅಂಕಗಳ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಎಚ್ ಡಿಎಫ್ ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಭರ್ಜರಿ ಲಾಭ ಗಳಿಸಿದೆ.
ಇದನ್ನೂ ಓದಿ:ಹೊಸಪೇಟೆ : ಹಂಪಿ ನದಿ ತಟದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ
ಮುಂಬಯಿ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿಯೇ ಸೆನ್ಸೆಕ್ಸ್ ಸೂಚ್ಯಂಕ 252.54 ಅಂಕ ಏರಿಕೆಯೊಂದಿಗೆ 56,044.81 ಅಂಕಗಳ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ 66.75 ಅಂಕ ಏರಿಕೆಯೊಂದಿಗೆ 16,681.35 ಅಂಕಗಳ ಮುನ್ನಡೆ ಕಂಡಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆ ಎಚ್ ಡಿಎಫ್ ಸಿ ಬ್ಯಾಂಕ್, ಆಲ್ಟ್ರಾ ಟೆಕ್ ಸಿಮೆಂಟ್, ಬಜಾಜ್ ಫೈನಾನ್ಸ್, ಪವರ್ ಗ್ರಿಡ್, ಎಲ್ ಆ್ಯಂಡ್ ಟಿ, ಬಜಾಜ್ ಫಿನ್ ಸರ್ವ್ ಮತ್ತು ಎಚ್ ಡಿಎಫ್ ಸಿ ಷೇರುಗಳು ಶೇ.2ಕ್ಕಿಂತ ಅಧಿಕ ಲಾಭ ಗಳಿಸಿದೆ.
ಸೆನ್ಸೆಕ್ಸ್ ಏರಿಕೆ ಹೊರತಾಗಿಯೂ ಇಂಡಸ್ ಇಂಡ್ ಬ್ಯಾಂಕ್, ಕೋಟಕ್ ಬ್ಯಾಂಕ್, ಬಜಾಜ್ ಆಟೋ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ. ಮಂಗಳವಾರ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 209.69 ಅಂಕ ಏರಿಕೆಯೊಂದಿಗೆ 55,792.27 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಪೂರ್ಣಗೊಳಿಸಿತ್ತು.