ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಸೋಮವಾರ(ಜುಲೈ 19) ಮುಂಬಯಿ ಷೇರುಪೇಟೆ 587 ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ವಿಶಾಲ ಗಾಣಿಗ ಕೊಲೆ ಪ್ರಕರಣ: ಪತಿಯಿಂದಲೇ ಕೊಲೆಗೆ ಸುಪಾರಿ? : ಹಂತಕರಿಬ್ಬರು ಪೊಲೀಸ್ ವಶದಲ್ಲಿ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 586.66 ಅಂಕಗಳಷ್ಟು ಇಳಿಕೆಯಾಗಿದ್ದು, 52,533.40 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 171 ಅಂಕ ಕುಸಿತವಾಗಿದ್ದು, 15,752.40ರ ಗಡಿಗೆ ಕುಸಿದಿದೆ.
ಸೆನ್ಸೆಕ್ಸ್ ಇಳಿಕೆಯಿಂದ ಎಚ್ ಡಿಎಫ್ ಸಿ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಎಚ್ ಡಿಎಫ್ ಸಿ, ಮಾರುತಿ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಎನ್ ಟಿಪಿಸಿ, ನೆಸ್ಲೆ ಇಂಡಿಯಾ, ಡಾ.ರೆಡ್ಡೀಸ್ ಮತ್ತು ಸನ್ ಫಾರ್ಮಾ ಷೇರುಗಳು ಲಾಭ ಗಳಿಸಿದೆ.
ಅಮೆರಿಕದ ಸೇರಿದಂತೆ ಜಗತ್ತಿನ ವಿವಿಧೆಡೆ ಕೋವಿಡ್ 19 ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶೀಯ ಈಕ್ವಿಟಿ ಮಾರಾಟದಲ್ಲಿ ಭಾರೀ ಇಳಿಕೆಯಾದ ಪರಿಣಾಮ ಸೆನ್ಸೆಕ್ಸ್, ನಿಫ್ಟಿ ಕುಸಿತಕ್ಕೆ ಕಾರಣವಾಗಿದೆ ಎಂದು ಬಿನೋದ್ ಮೋದಿ ವಿಶ್ಲೇಷಿಸಿದ್ದಾರೆ.