ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮಂಗಳವಾರ(ಮೇ 11) 450 ಅಂಕಗಳಷ್ಟು ಕುಸಿತ ಕಂಡಿದ್ದು, ಇದರಿಂದ ಐಸಿಐಸಿಐ, ಕೋಟಕ್ ಬ್ಯಾಂಕ್ ಗಳ ಷೇರು ನಷ್ಟ ಅನುಭವಿಸಿದೆ.
ಇದನ್ನೂ ಓದಿ:ಸಾವಿನಲ್ಲೂ ಒಂದಾದ ಕಾಫಿನಾಡಿನ ಈ ದಂಪತಿ : ಕುಟುಂಬಸ್ಥರ ಆಕ್ರಂದನ
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 470.10 ಅಂಕ ಇಳಿಕೆಯಾಗಿದ್ದು, 49,032.31 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 145.80 ಅಂಕಗಳಷ್ಟು ಕುಸಿತ ಕಂಡಿದ್ದು, 14,796.55ರ ಗಡಿಗೆ ತಲುಪಿದೆ.
ಸೆನ್ಸೆಕ್ಸ್ ಇಳಿಕೆಯಿಂದ ಕೋಟಕ್ ಬ್ಯಾಂಕ್, ಎಚ್ ಡಿಎಫ್ ಸಿ, ಟಿಸಿಎಸ್, ಐಸಿಐಸಿಐ ಬ್ಯಾಂಕ್, ಬಜಾಜ್ ಆಟೋ, ಟೆಕ್ ಮಹೀಂದ್ರ, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಮತ್ತು ಮಾರುತಿ ಷೇರುಗಳು ನಷ್ಟ ಅನುಭವಿಸಿದೆ.
ಮತ್ತೊಂದೆಡೆ ಸನ್ ಫಾರ್ಮಾ, ಎನ್ ಟಿಪಿಸಿ, ಒಎನ್ ಜಿಸಿ, ಐಟಿಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿವೆ.