ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ನಿಧಾನಗತಿಯ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮಂಗಳವಾರ(ಮೇ 11) 341 ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಕೋವಿಡ್ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್ ಸೇವೆ ನೀಡಲು ಮುಂದಾದ ಫಾಲ್ಕನ್ ಕ್ಲಬ್
ಮುಂಬಯಿ ಷೇರುಪೇಟೆಯ ಬಿಎಸ್ ಇ ಸೆನ್ಸೆಕ್ಸ್ 340.60 ಅಂಕ ಕುಸಿತವಾಗಿದ್ದು, 49,161.81 ಅಂಕಗಳೊಂದಿಗೆ ದಿನದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 91.60 ಅಂಕ ಇಳಿಕೆಯಾಗಿದ್ದು, 14,850.75 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿದೆ.
ಸೆನ್ಸೆಕ್ಸ್ ಕುಸಿತದಿಂದ ಕೋಟಕ್ ಬ್ಯಾಂಕ್, ಎಚ್ ಡಿಎಫ್ ಸಿ, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಟೆಕ್ ಮಹೀಂದ್ರ, ಎಚ್ ಯುಎಲ್ ಮತ್ತು ಟೈಟಾನ್ ಷೇರುಗಳು ನಷ್ಟ ಅನುಭವಿಸಿದೆ.
ಮತ್ತೊಂದೆಡೆ ಎನ್ ಟಿಪಿಸಿ, ಒಎನ್ ಜಿಸಿ, ಪವರ್ ಗ್ರಿಡ್, ಸನ್ ಫಾರ್ಮಾ, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಎಸ್ ಬಿಐ ಷೇರುಗಳು ಲಾಭಗಳಿಸಿವೆ.