ನವದೆಹಲಿ: ಟೆಕ್ ಕಂಪನಿಗಳ ಮೇಲೆ ಚೀನಾ ನಿಯಂತ್ರಣ ಹೇರಿದ ಪರಿಣಾಮ ಏಷ್ಯನ್ ಷೇರುಮಾರುಕಟ್ಟೆಯಲ್ಲಿ ಭರ್ಜರಿ ಷೇರು ವಹಿವಾಟಿನ ಹಿನ್ನೆಲೆಯಲ್ಲಿ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಕುಸಿತದೊಂದಿಗೆ ಮಂಗಳವಾರದ ವಹಿವಾಟು ಅಂತ್ಯಗೊಳಿಸಿದೆ.
ಇದನ್ನೂ ಓದಿ:ಇ-ಫೈಲಿಂಗ್ ಪೋರ್ಟಲ್ ನಿರ್ಮಿಸಲು ಇನ್ಫೋಸಿಸ್ ಗೆ 164.5 ಕೋಟಿ..!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 273.51 ಅಂಕ ಕುಸಿತ ಕಂಡಿದ್ದು, 52,578.45 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 78 ಅಂಕ ಇಳಿಕೆಯಾಗಿದ್ದು, 15,746.45ರ ಗಡಿಗೆ ಕುಸಿದಿದೆ.
ಸೆನ್ಸೆಕ್ಸ್ ಕುಸಿತದಿಂದ ಡಾ.ರೆಡ್ಡೀಸ್, ಆ್ಯಕ್ಸಿಸ್ ಬ್ಯಾಂಕ್, ಕೋಟಕ್ ಬ್ಯಾಂಕ್, ಸನ್ ಫಾರ್ಮಾ, ಎಚ್ ಡಿಎಫ್ ಸಿ, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಶೇ.3.23ರಷ್ಟು ಕುಸಿತ ಕಂಡಿದೆ.
ಟಾಟಾ ಸ್ಟೀಲ್, ಬಜಾಜ್ ಫಿನ್ ಸರ್ವ್, ಎಸ್ ಬಿಐ, ಬಜಾಜ್ ಫೈನಾನ್ಸ್, ನೆಸ್ಲೆ ಇಂಡಿಯಾ ಮತ್ತು ಎಲ್ ಆ್ಯಂಡ್ ಟಿ ಷೇರುಗಳು ಶೇ.2.50ರಷ್ಟು ಲಾಭಗಳಿಸಿದೆ. ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಏರಿಕೆ ಕಂಡಿತ್ತು.