ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಬುಧವಾರ (ಮೇ 25) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 300 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ: ಹೆಚ್ ಡಿಕೆ
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 303.35 ಅಂಕ ಇಳಿಕೆಯಾಗಿದ್ದು, 53,749.26 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಷೇರುಪೇಟೆಯ ಮಧ್ಯಂತರ ವಹಿವಾಟಿನಲ್ಲಿ ಸೆನ್ಸೆಕ್ಸ್ ಅಂಕ 53,683ಕ್ಕೆ ಇಳಿಕೆಯಾಗಿತ್ತು.
ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 99.35 ಅಂಕ ಕುಸಿತ ಕಂಡಿದ್ದು, 16,025.80 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಏಷಿಯನ್ ಪೇಂಟ್ಸ್, ಟಿಸಿಎಸ್, ವಿಪ್ರೋ, ಟೆಕ್ ಮಹೀಂದ್ರ, ಎಲ್ ಆ್ಯಂಡ್ ಟಿ, ಇನ್ಫೋಸಿಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್ ಸಿಎಲ್ ಟೆಕ್ನಾಲಜೀಸ್, ಮಹೀಂದ್ರ ಆ್ಯಂಡ್ ಮಹೀಂದ್ರ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಎನ್ ಟಿಪಿಸಿ, ಭಾರ್ತಿ ಏರ್ ಟೆಲ್, ಎಚ್ ಡಿಎಫ್ ಸಿ, ಕೋಟಕ್ ಮಹೀಂದ್ರ ಬ್ಯಾಂಕ್, ನೆಸ್ಲೆ, ಐಸಿಐಸಿಐ ಬ್ಯಾಂಕ್, ಐಟಿಸಿ ಷೇರುಗಳು ಲಾಭಗಳಿಸಿದೆ. ಜಾಗತಿಕ ಮಟ್ಟದಲ್ಲಿ ಹಾಂಗ್ ಕಾಂಗ್, ಶಾಂಘೈ ಮತ್ತು ಸಿಯೋಲ್ ಷೇರುಪೇಟೆ ಸೆನ್ಸೆಕ್ಸ್ ಏರಿಕೆ ಕಂಡಿರುವುದಾಗಿ ವರದಿ ತಿಳಿಸಿದೆ.