ನವದೆಹಲಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಮಂದಗತಿಯ ವಹಿವಾಟಿನ ಪರಿಣಾಮ ಶುಕ್ರವಾರ (ಜುಲೈ 09) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 300 ಅಂಕಗಳಷ್ಟು ಕುಸಿತ ಕಂಡಿದೆ. ಇದರಿಂದ ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್ ಷೇರುಗಳು ಭಾರೀ ನಷ್ಟ ಕಂಡಿದೆ.
ಇದನ್ನೂ ಓದಿ:ನಾಲ್ಕು ವರ್ಷಗಳ ಬಳಿಕ ಆಸೀಸ್ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ ಆರ್ ಸಿಬಿ ಆಲ್ ರೌಂಡರ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 340 ಅಂಕಗಳಷ್ಟು ಕುಸಿತವಾಗಿದ್ದು, 52,286.86 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 77.75 ಅಂಕ ಇಳಿಕೆಯಾಗಿದ್ದು, 15,650 ಅಂಕಗಳ ವಹಿವಾಟು ನಡೆಸಿದೆ.
ಸೆನ್ಸೆಕ್ಸ್ ಇಳಿಕೆಯಿಂದಾಗಿ ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಬಜಾಜ್ ಆಟೋ ಷೇರುಗಳು ನಷ್ಟ ಅನುಭವಿಸಿದೆ. ಮತ್ತೊಂದೆಡೆ ಟಾಟಾ ಸ್ಟೀಲ್, ಬಜಾಜ್ ಫಿನ್ ಸರ್ವ್, ಡಾ.ರೆಡ್ಡೀಸ್, ಸನ್ ಫಾರ್ಮಾ ಮತ್ತು ಟೈಟಾನ್ ಷೇರುಗಳು ಲಾಭ ಗಳಿಸಿದೆ.
ಗುರುವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 485.82 ಅಂಕ ಕುಸಿತವಾಗಿದ್ದು, 52,568.94 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ಎನ್ ಎಸ್ ಇ ನಿಫ್ಟಿ ಕೂಡಾ 151.75 ಅಂಕ ಇಳಿಕೆಯೊಂದಿಗೆ 15,727.90ರ ಗಡಿಗೆ ಕುಸಿದಿತ್ತು.