ಮುಂಬಯಿ: ಏಷಿಯನ್ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಸೋಮವಾರ (ಮೇ 30) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ ಬರೋಬ್ಬರಿ ಒಂದು ಸಾವಿರಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ಕನ್ನಡದ ಡಿಂಡಿಮವನ್ನು ರಾಷ್ಟ್ರ ಮಟ್ಟದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತೇನೆ: ನಟ ಜಗ್ಗೇಶ್
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,67.82 ಅಂಕಗಳಷ್ಟು ಏರಿಕೆಯಾಗಿದ್ದು, 56,052.96 ಅಂಕಗಳಲ್ಲಿ ವಹಿವಾಟು ನಡೆದಿದೆ. ಮತ್ತೊಂದೆಡೆ ಎನ್ ಎಸ್ ಇ ನಿಫ್ಟಿ 262.75 ಅಂಕಗಳಷ್ಟು ಏರಿಕೆಯೊಂದಿಗೆ 16,615.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಇನ್ಫೋಸಿಸ್, ಟೈಟಾನ್, ಎಚ್ ಸಿಎಲ್ ಟೆಕ್ನಾಲಜೀಸ್, ಎಲ್ ಆ್ಯಂಡ್ ಟಿ, ರಿಲಯನ್ಸ್ ಇಂಡಸ್ಟ್ರೀಸ್, ಆಲ್ಟ್ರಾಟೆಕ್ ಸಿಮೆಂಟ್, ವಿಪ್ರೋ, ಟಿಸಿಎಸ್ ಮತ್ತು ಎಚ್ ಡಿಎಫ್ ಸಿ ಷೇರುಗಳು ಆರಂಭಿಕ ವಹಿವಾಟಿನಲ್ಲಿಯೇ ಲಾಭಗಳಿಸಿದೆ.
ಮತ್ತೊಂದೆಡೆ ಡಾ.ರೆಡ್ಡೀಸ್ ಷೇರು ಮೌಲ್ಯ ಮಾತ್ರ ಕುಸಿತ ಕಂಡಿದೆ. ಇನ್ನುಳಿದಂತೆ ಸಿಯೋಲ್, ಶಾಂಘೈ, ಟೋಕಿಯೋ ಮತ್ತು ಹಾಂಗ್ ಕಾಂಗ್ ಷೇರು ಮಾರುಕಟ್ಟೆಯ ವಹಿವಾಟು ಧನಾತ್ಮಕ ಏರಿಕೆಯೊಂದಿಗೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.