ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಪಾಸಿಟಿವ್ ಟ್ರೆಂಡ್ ಪರಿಣಾಮ ಸೋಮವಾರ (ಜನವರಿ 10) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತೆ 60,000 ಅಂಕಗಳ ಗಡಿ ದಾಟುವ ಮೂಲಕ ದಿನಾಂತ್ಯದ ವಹಿವಾಟನ್ನು ಅಂತ್ಯಗೊಂಡಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಒಮಿಕ್ರಾನ್ ಹೆಚ್ಚಳ: ಸೋಂಕಿತರ ಸಂಖ್ಯೆ 479 ಕ್ಕೆ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 650.98 ಅಂಕಗಳಷ್ಟು ಏರಿಕೆಯೊಂದಿಗೆ 60,427.36 ಅಂಕಗಳಲ್ಲಿ ದಿನಾಂತ್ಯದ ವಹಿವಾಟನ್ನು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 190.60 ಅಂಕಗಳಷ್ಟು ಏರಿಕೆಯಾಗಿದ್ದು, 18,003.30 ಅಂಕಗಳ ಗಡಿ ದಾಟಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟೈಟಾನ್, ಮಾರುತಿ, ಎಸ್ ಬಿಐ, ಎಲ್ ಆ್ಯಂಡ್ ಟಿ, ಎಚ್ ಡಿಎಫ್ ಸಿ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ವಿಪ್ರೋ, ನೆಸ್ಲೆ ಇಂಡಿಯಾ, ಏಷ್ಯನ್ ಪೇಂಟ್ಸ್ ಮತ್ತು ಪವರ್ ಗ್ರಿಡ್ ಷೇರುಗಳು ನಷ್ಟ ಕಂಡಿದೆ.
ಪ್ರಮುಖ ಕಾರ್ಪೋರೇಟ್ ಸಂಸ್ಥೆಗಳ ಹಾಗೂ ಎಚ್ ಡಿಎಫ್ ಸಿ ಬ್ಯಾಂಕ್ ನ ತ್ರೈಮಾಸಿಕ ವರದಿ ಈ ವಾರದಲ್ಲಿ ಘೋಷಣೆಯಾಗಲಿದ್ದು, ಇದು ಟೆಕ್ ಮತ್ತು ಬ್ಯಾಂಕಿಂಗ್ ಷೇರುಗಳ ಮೌಲ್ಯದಲ್ಲಿ ಟ್ರೆಂಡ್ ಸೃಷ್ಟಿಸುವ ಸಾಧ್ಯತೆ ಇದ್ದಿರುವುದಾಗಿ ವಿಶ್ಲೇಷಕರು ತಿಳಿಸಿದ್ದಾರೆ.