ನವದೆಹಲಿ : 2019 ರಲ್ಲಿ ಇಲ್ಲಿ ನಡೆದ ಜಾಮಿಯಾ ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಶಾರ್ಜಿಲ್ ಇಮಾಮ್‌ಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನುಜ್ ಅಗರವಾಲ್ ಅವರು ಜಾಮೀನು ಮಂಜೂರು ಮಾಡಿದ್ದು, ನ್ಯಾಯಾಲಯದಿಂದ ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಇದನ್ನೂ ಓದಿ: ಮಾತನಾಡಲು ಅವಕಾಶವಿಲ್ಲ, ಪಾದಯಾತ್ರೆ ಬಿಟ್ಟು ನಮಗೆ ಬೇರೆ ದಾರಿಯಿಲ್ಲ; ರಾಹುಲ್ ಗಾಂಧಿ
ನ್ಯೂ ಫ್ರೆಂಡ್ಸ್ ಕಾಲೋನಿ ಪ್ರಕರಣದಲ್ಲಿ, 2019 ಡಿಸೆಂಬರ್ 13 ರಂದು ಮಾಡಿದ ದೇಶದ್ರೋಹದ ಭಾಷಣದ ಕಾರಣದಿಂದ ಜಾಮಿಯಾ ಗಲಭೆಗೆ ಪ್ರಚೋದನೆ ನೀಡಿದ ಮತ್ತು ಪ್ರಚೋದನೆಗಾಗಿ ಇಮಾಮ್ ಅವರನ್ನು ಬಂಧಿಸಲಾಗಿತ್ತು.
ತನಿಖೆಯ ಸಮಯದಲ್ಲಿ, ಪೊಲೀಸರು ಶಾರ್ಜಿಲ್ ವಿರುದ್ಧ ಸೆಕ್ಷನ್ 124 ಎ (ದೇಶದ್ರೋಹ) ಮತ್ತು 153 ಎ ಐಪಿಸಿ (ಕೋಮುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅನ್ನು ಅನ್ವಯಿಸಿದ್ದರು.