Advertisement

Andhra Pradesh ಕಾಂಗ್ರೆಸ್‌ಗೆ ಶರ್ಮಿಳಾ ಸಾರಥ್ಯ?

11:59 PM Jan 15, 2024 | Team Udayavani |

ಅಮರಾವತಿ: ಆಂಧ್ರಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥ ಗಿಡುಗು ರುದ್ರ ರಾಜು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಈ ಸ್ಥಾನವನ್ನು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ವೈ.ಎಸ್‌.ಶರ್ಮಿಳಾ ಅಲಂಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶರ್ಮಿಳಾರನ್ನು ಅಧ್ಯಕ್ಷ ಸ್ಥಾನಕ್ಕೇರಿಸುವ ನಿಟ್ಟಿನಲ್ಲಿಯೇ ರುದ್ರರಾಜು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆಂಧ್ರ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರ ಸಹೋದರಿ ವೈ.ಎಸ್‌.ಶರ್ಮಿಳಾ ತಮ್ಮ ವೈಎಸ್‌ಆರ್‌ ತೆಲಂಗಾಣ ಕಾಂಗ್ರೆಸ್‌ ಪಕ್ಷವನ್ನು ಕಾಂಗ್ರೆಸ್‌ ಜತೆಗೆ ವಿಲೀನಗೊಳಿಸಿದ್ದರು. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next